NEWSನಮ್ಮರಾಜ್ಯ

ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್ ಗಸ್ತಿ ನಾಮಪತ್ರ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ರಾಜ್ಯಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ  ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.

ಹಾಲಿ ಸಂಸದ ಪ್ರಭಾಕರ ಕೋರೆ ಮತ್ತು ಉಮೇಶ್ ಕತ್ತಿ ಬದಲಿಗೆ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೆ ರಾಜ್ಯಸಭಾ ಟಿಕೆಟ್ ಅನ್ನು ವರಿಷ್ಠರು ನೀಡಿದ್ದರಿಂದ ಇಬ್ಬರು ವಿಧಾನ ಸಭಾ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರಿಗೆ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ನಾಮಪತ್ರ ಸಲ್ಲಿಕೆಗೂ ಮುನ್ನ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಜೊತೆಗೆ ಮಾತುಕತೆ ನಡೆಸಿದ್ದರು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರನ್ನು ಭೇಟಿಯಾಗಿ ಬಿಫಾರಂ ಪಡೆದುಕೊಂಡಿದ್ದರು.

ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ರಮೇಶ್ ಎಲ್ ಜಾರಕಿಹೊಳಿ ಹಾಜರಿದ್ದರು.

ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್‌  ಅಭ್ಯರ್ಥಿ ಎಚ್‌.ಡಿ.ದೇವೇಗೌಡ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ