ಬೆಂಗಳೂರು: ಬೊಮ್ಮನಹಳ್ಳಿ ವಲಯಕ್ಕೆ ಕೊರೊನಾ ಸೋಂಕಿತರ ಆರೋಗ್ಯ ಕಾಪಾಡುವ ಹಿನ್ನೆಲೆಯಲ್ಲಿ ವಾರ್ಡ್ ಗೆ ತಲಾ ಒಂದರಂತೆ ಎಲ್ಲಾ ವಾರ್ಡ್ ಗಳಿಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೊಮ್ಮನಹಳ್ಳಿ ವಲಯ ಕೊರೊನಾ ಉಸ್ತುವಾರಿಗೆ ವಹಿಸಿಕೊಂಡಿರುವ ಸುರೇಶ್ ಕುಮಾರ್ ಅವರು ಭಾನುವಾರ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದರು.
ಪ್ರಸ್ತುತ ಕೊರೊನಾ ಪರೀಕ್ಷೆ ಫಲಿತಾಂಶ ಬರಲು ಸರಾಸರಿ ನಾಲ್ಕರಿಂದ ಐದು ದಿನಗಳಾಗುತ್ತಿದೆ. ಇನ್ನು ಮುಂದೆ ಒಂದು ದಿನದಲ್ಲಿ ಫಲಿತಾಂಶ ಬರುವಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇದೇ ವೇಳೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.