ನಮ್ಮರಾಜ್ಯಸಿನಿಪಥ

ಸ್ಯಾಂಡಲ್‌ವುಡ್‌ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೃದಯಾಘಾತದಿಂದ ನಟ ಚಿರಂಜೀವಿ ಸರ್ಜಾ (39) ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ತೊಂದರೆಗೆ ಉಂಟಾಗಿದ್ದರಿಂದ ಶನಿವಾರ ಜಯನಗರದ ಸಾಗರ್‌  ಅಪೋಲೋ ಆಸ್ಪತ್ರೆಗೆ ದಾಖಲಿಸಾಗಿತ್ತು. ಆಸ್ಪತ್ರೆಯ  ವೈದ್ಯರ ತಂಡ ಚಿರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮದ್ಯಾಹ್ನ 3:40ರ ಸುಮಾರಿಗೆ ನಿಧನರಾಗಿದ್ದಾರೆ.

ವಾಯುಪುತ್ರ ಚಿತ್ರದ ಮೂಲಕ ಚಿರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.  ‘ದಂಡಂ ದಶಗುಣಂ’, ‘ವರದ ನಾಯಕ’, ‘ಸಿಂಗ’, ‘ಚಿರು’,   ‘ಗಂಡೆದೆ’ ಸೇರಿ 22ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸುದೀಪ್ ಜತೆಗೆ ಅವರು ‘ವರದ ನಾಯಕ’ ಸಿನಿಮಾದಲ್ಲಿ ನಟಿಸಿದ್ದರು.

ನಟ ಅರ್ಜುನ್ ಸರ್ಜಾ ಅವರ ಅಳಿಯ ಚಿರಂಜೀವಿ ಸರ್ಜಾ. ಇವರ ಸಹೋದರ ಧ್ರುವ ಸರ್ಜಾ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. 1980 ಅಕ್ಟೋಬರ್ 17ರಂದು ಚಿರು ಜನಿಸಿದ್ದರು. ಆದರೆ ಇಂದು ವಿಧಿಯ ಕರೆಗೆ ಹೋಗೊಟ್ಟಿರುವುದು ಇಡೀ ಚಿತ್ರರಂವೇ ಒಂದುರೀತಿಯ ದಿಗ್ಬ್ರಮೆಗೆ ಒಳಗಾಗಿದೆ.

ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಗೆ ಸಹೋದರ ಧೃವ ಸರ್ಜಾ, ಅರ್ಜುನ್ ಸರ್ಜಾ ಮತ್ತು ಚಲನಚಿತ್ರ ನಿರ್ಮಾಪಕರು ಭೇಟಿ ಸೇರಿ ಹಲವಾರು ನಟ ನಟಿಯರು, ಗಣ್ಯವ್ಯಕ್ತಿಗಳು ಆಗಮಿಸಿದ್ದಾರೆ.

ಸಿಎಂ ಯಡಿಯೂರಪ್ಪ ಸಂತಾಪ
ಕನ್ನಡದ ಖ್ಯಾತ ಕಲಾವಿದ,  ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕೇವಲ 39 ವರ್ಷದ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರ ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

 

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ