ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾದ ಕೆಲ ಸಿಬ್ಬಂದಿ ಸೇರಿ ತಮ್ಮ ಆಪ್ತರಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿರುವುದಿಂದ ಶುಕ್ರವಾರದಿಂದ ಸ್ವಯಂ ಕ್ವಾರಂಟೈನ್ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಪುಸ್ತಕಗಳೊಂದಿಗೆ ಕಾಲ ಕಳೆಯುತ್ತಿದ್ದಾರೆ.
ಈ ಬಗ್ಗೆ ಅವರೇ ಟ್ವಿಟ್ ಮಾಡಿದ್ದು, ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್ ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ರಾಜ್ಯವನ್ನು ಲಾಕ್‌ಡೌನ್ ಮಾಡಬೇಕೆ ಬೇಡವೆ ಎಂಬುವುದು ಸೇರಿ ವಿವಿದ ವಿಷಯಗಳ ಬಗ್ಗೆ ಅಧಿಕಾಋಇಗಳು ಮತ್ತು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಸಭೆ ನಡೆದ ಸಿಎಂ ಬಳಿಕ ಪುಸ್ತಕಗಳೊಂದಿಗೆ ಕಾಲ ಕಳೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.