NEWSನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ 5ದಿನ ಸ್ವಯಂ ಹೋಂ ಕ್ವಾರಂಟೈನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನ ಆತಂಕದಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಐದು ದಿನಗಳವರಗೆ ಸ್ವಯಂ ಕ್ವಾರಂಟೈನ್‌ ಘೋಷಿಸಿಕೊಂಡಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿರುವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐದು ದಿನ ಹೋಂ ಕ್ವಾರಂಟೈನ್‌ ಆಗಲಿದ್ದಾರೆ.

ಸಿಎಂ ಅಧಿಕೃತ ನಿವಾಸದಲ್ಲಿ ಸಿಎಂ ಉಳಿಯಲಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳೊಂದಿಗೆ ಸಿಎಂ  ಚರ್ಚೆ ನಡೆಸಲಿದ್ದಾರೆ.

ಇದಕ್ಕೂ ಮುನ್ನ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಅವರ ನಂತರ ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರಿಗೂ ಕೊರೊನಾ ಸೋಂಕು ಇರುವುದು ಖಚಿತವಾಗಿತ್ತು. ಅಂಬರೀಷ್‌ ಸ್ಮಾರಕ ನಿರ್ಮಾಣ ಸಂಬಂಧ ಇವರು ಸಿಎಂ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದರು.

ಶಕ್ತಿ ಸೌಧದ ಪೊಲೀಸ್ ಠಾಣೆ ಸೀಲ್ ಡೌನ್
ಇದೀಗ ವಿಧಾನ ಸೌಧದಲ್ಲೂ ಕೊರೊನಾ ಆತಂಕ ಎದುರಾಗಿದೆ.  ಇತ್ತ ವಿಧಾನ ಸೌಧದ ಪೊಲೀಸ್ ಠಾಣೆಯಲ್ಲಿ ಓರ್ವ ಪೊಲೀಸ್‌ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಕ್ತಿ ಸೌಧದ ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದೆ. ಜತೆಗೆ ವಿಧಾನ ಸೌಧಕ್ಕೂ ಸ್ಯಾನಿಟೈಸ್ ಮಾಡಲಾಗುತ್ತಿದೆ.

 

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು