NEWSನಮ್ಮರಾಜ್ಯ

ಕೋವಿಡ್‌ ಪರೀಕ್ಷಾ ವರದಿ ವಿಳಂಬಕ್ಕೆ ಸೂಕ್ತ ವರದಿ ಸಲ್ಲಿಸಿ: ಸರ್ಕಾರಕ್ಕೆ ಚಾಟಿ ಬೀಸಿದ ಹೈ ಕೋರ್ಟ್‌  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ಕೊರೊನಾ ಪರೀಕ್ಷೆಗೆ ಒಳಗಾದ ವ್ಯಕ್ತಿಗಳಿಗೆ ಪರೀಕ್ಷಾ ವರದಿ ಸಿಗುವುದು ಏಕೆ ತಡವಾಗುತ್ತಿದೆ ಎಂದು ಸರ್ಕಾರವನ್ನು ಹೈ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಕೊರೊನಾ ಪರೀಕ್ಷೆ ವರದಿ ತಡವಾಗುತ್ತಿದೆ ಜತೆಗೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬವಾಗುತ್ತಿರುವುದಕ್ಕೆ ನೀವು ಏನು ಹೇಳುತ್ತೀರಿ ಎಂದು ಪ್ರಶ್ನಿಸಿರುವ ಹೈಕೋರ್ಟ್ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಳಿ ವಿವರ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಕೊರೊನಾ ಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಆಲಿಸುವ ಸಂದರ್ಭದಲ್ಲಿ, ಲ್ಯಾಬ್ ಗಳಿಂದ ಕೊರೊನಾ ಪರೀಕ್ಷೆ ವರದಿ ಸಿಗುವುದು ವಿಳಂಬವಾದರೆ ಮತ್ತು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ವಿಳಂಬವಾಗುತ್ತದೆ. ಇದರಿಂದ ಬಹಳ ಸಮಸ್ಯೆಯಾಗುವುದಿಲ್ಲ ಎಂದು  ಕೇಳಿದೆ.

ಇಷ್ಟು ತಡವಾದಾಗ ಈ ಮಧ್ಯೆ ಕುಟುಂಬ ಸದಸ್ಯರಿಗೆ ಅಥವಾ ಬೇರೊಬ್ಬರಿಗೆ ಸೋಂಕಿತರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕೊರೊನಾ ರೋಗಿಯ ಬಗ್ಗೆ ಮಾಹಿತಿ ಸಿಕ್ಕಿದ ನಂತರ ಆಸ್ಪತ್ರೆಗೆ ದಾಖಲಿಸಲು 12ರಿಂದ 14 ಗಂಟೆ ಬೇಕಾಗುತ್ತದೆ ಎಂದು ಬಿಬಿಎಂಪಿ ಪರ ವಕೀಲರು ವರದಿ ಸಲ್ಲಿಸಿದರು.

ಕೋವಿಡ್ 19 ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಬಿಬಿಎಂಪಿ ಅಥವಾ ಜಿಲ್ಲಾ ಆರೋಗ್ಯಾಧಿಕಾರಿಗಳು ಅಗತ್ಯವಿರುತ್ತಾರೆಯೇ ಎಂದು ಸಹ ಸರ್ಕಾರವನ್ನು ಹೈಕೋರ್ಟ್ ಕೇಳಿದೆ.  ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುವ ವಿಚಾರವನ್ನು ಸಹ ನ್ಯಾಯಾಲಯ ಕೇಳಿತು. ಇಂತಹ ಆಸ್ಪತ್ರೆಗಳ ವಿರುದ್ಧ ವಿಚಾರಣೆ ನಡೆಸಿದರೆ ಜನರಿಗೆ ಮತ್ತು ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದಂತೆ ಆಗುತ್ತದೆ ಎಂದು ತಿಳಿಸಿದೆ.

ಇನ್ನು ಇತ್ತೀಚೆಗೆ ನಗರದ 9ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಸುತ್ತಿ ಬೆಡ್‌ ಖಾಲಿ ಇಲ್ಲ ಕೊನೆಗೆ ಆಂಬುಲೆನ್ಸ್‌ನಲ್ಲೇ ಪ್ರಾಣ ಬಿಟ್ಟಿರುವ ಕೊರೊನಾ ಸೋಂಕಿತರನ್ನು ನಿರ್ಲಕ್ಷಿಸಿರುವ ಬಗ್ಗೆ ತನಿಖೆ ನಡೆಸುವಂತೆ ಮೌಖಿಕವಾಗಿ ಆದೇಶ ನೀಡಿದೆ. ಅಲ್ಲದೆ ಕೋವಿಡ್‌ ಪರೀಕ್ಷೆ ವಿಳಂಬವಾಗುತ್ತಿರವುದಕ್ಕೆ ಸೂಕ್ತ ವರದಿ ನೀಡುವಂತೆ ತಿಳಿಸಿ ಜುಲೈ 13ಕ್ಕೆ ಪ್ರಕರಣವನ್ನು ಮುಂದೂಡಿತು.

1 Comment

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು