ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯವನ್ನು ಜು.31ರವರೆಗೆ ಸೀಲ್‌ಡೌನ್ ಮಾಡಿ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಆದೇಶಿಸಿದ್ದಾರೆ.
ಲಾಕ್‌ಡೌನ್ ಸಡಿಲಿಕೆ ಬಳಿಕ ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆಗಳು ಮತ್ತೆ ಪ್ರಾರಂಭಗೊಂಡಿದ್ದವು. ಆದರೆ, ಮಾರುಕಟ್ಟೆ ವ್ಯಾಪ್ತಿಯಲ್ಲಿ ಹೆಚ್ಚಿನ ಜನರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಜೂ.22ರಿಂದ ಜು.7ರವರೆಗೆ 15 ದಿನ ಮಾರುಕಟ್ಟೆ ಸೀಲ್’ಡೌನ್ ಮಾಡಿ ಆದೇಶಿಸಿತ್ತು. ಇದೀಗ ಮತ್ತೆ ಸೀಲ್‌ಡೌನ್ ಅವಧಿ ಮುಕ್ತಾಯಗೊಂಡಿದ್ದರೂ ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಕಾರಣ ಜು.31ರವರೆಗೆ ಮತ್ತೆ ಸೀಲ್’ಡೌನ್ ಅವಧಿ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.