NEWSನಮ್ಮರಾಜ್ಯರಾಜಕೀಯ

ಇಂದು ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ಗಂಟೆ ವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯಾದ್ಯಂತ  ಶನಿವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಸವಿರಲಿದೆ. ಈ ವೇಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡ ಬಾರದು ಎಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ದಿನಸಿ ಅಂಗಡಿ, ಹಣ್ಣು-ತರಕಾರಿ ಅಂಗಡಿ, ಮಾಂಸದಂಗಡಿ, ಔಷಧ ಮಳಿಗೆಗಳು ತೆರೆದಿರುತ್ತವೆ. ಈ ಅವಧಿಯಲ್ಲಿ ಸಾರ್ವಜನಿಕರು ಹೊರಗಡೆ ಓಡಾಟ ನಡೆಸಬೇಕಾದರೆ ಕಡ್ಡಾಯವಾಗಿ ಮಾಸ್ಕ್(ಮುಖಗವಸು) ಧರಿಸಿರಬೇಕು. ಸಾರ್ವಜನಿಕರು ಬಿಬಿಎಂಪಿ, ನಗರಪಾಲಿಕೆ ಪಟ್ಟಣ ಪಂಚಾಯಿತಿ, ಗ್ರಾಮಪಂಚಾಯಿತಿ ಸೇರಿ ಪೊಲೀಸ್, ಆರೋಗ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಜನರು ಅನಗತ್ಯವಾಗಿ ಓಡಾಟ ಮಾಡಿದರೆ ಪೊಲೀಸ್ ಅಧಿಕಾರಿಗಳು ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ. ಈ ಲಾಕ್ ಡೌನ್ ಅನ್ನು ಯಶಸ್ವಿಯಾಗಲು ಎಲ್ಲರೂ ಸಹಕರಿಸಿ.  ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ