ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಯಪುರ ವಾರ್ಡ್ನ 55 ವರ್ಷದ ರಾಜಕೀಯ ಮುಖಂಡರೊಬ್ಬರು ಶುಕ್ರವಾರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ವಾರದ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಅಸುನೀಗಿದ್ದಾರೆ.
ಇನ್ನು ಮೈಸೂರಿನ ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ರಾಮ್ದಾಸ್ ಅವರ ಇಬ್ಬರು ಆಪ್ತ ಸಹಾಯಕರಿಗೆ ಜ್ವರ, ನೆಗಡಿ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಶನಿವಾರ ವರದಿ ಬರುವ ಸಾಧ್ಯತೆ ಇದೆ. ಇನ್ನು ರಾಮ್ದಾಸ್ ಇವರ ಒಡನಾಟದಲ್ಲಿದ್ದ ಹಿನ್ನೆಲೆಯಲ್ಲಿ ಅವರಿಗೂ ಈಗ ಸೋಂಕಿನ ಭೀತಿ ಕಾಡುತ್ತಿದೆ.
Olledu modlu inthavrge agli samanya janakke beda