NEWSದೇಶ-ವಿದೇಶರಾಜಕೀಯ

ಜುಲೈ 18- ರಾಜ್ಯಲ್ಲಿ 4537 ಕೊರೊನಾ ಪಾಸಿಟಿವ್‌, 93ಮಂದಿ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ 4537 ಮಂದಿ ಇಂದು ಕೊರೊನಾ ಸೋಂಕಿಗೆ ಒಳಗಾಗಿದ್ದು, ಕೋವಿಡ್‌ -19 ತನ್ನ ಅಟ್ಟಹಾಸವನ್ನು ಸರವೇಗದಲ್ಲೇ ಮುಂದುವರಿಸುತ್ತಿದೆ.  ಜತೆಗೆ ಮರಣ ಮೃದಂಗ ಮುಂದುವರಿದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 93 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಒಂಟ್ಟು 1246ಕ್ಕೆ ( ಅನ್ಯಕಾರಣಕ್ಕೆ 6 ಸೇರಿ) ಏರಿಕೆಯಾಗಿದೆ.

ಕೊರೊನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 49 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 93 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2125 ಇನ್ನು ದಕ್ಷಿಣ ಕನ್ನಡ 509 ಧಾರವಾಡದಲ್ಲಿ 186, ಬಳ್ಳಾರಿಯಲ್ಲಿ 155, ಬೆಳಗಾವಿಯಲ್ಲಿ 137, ವಿಜಯಪುರ 175 ಹಾಗೂ ಯಾದಗಿರಿಯಲ್ಲಿ 4 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ರಾಜ್ಯದಲ್ಲಿ ಒಟ್ಟು 4537 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 59,652ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1018 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 22,498 ಸಕ್ರಿಯ ಪ್ರಕರಣಗಳು ಸೇರಿ ರಾಜ್ಯದಲ್ಲಿ ಒಟ್ಟು 36,631 ಸಕ್ರಿಯ ಪ್ರಕರಣಗಳಿವೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...