ಬೆಂಗಳೂರು: ನಿನ್ನೆ ಶತಕ ತಪ್ಪಿಸಿಕೊಂಡಿದ್ದ ಕೊರೊನಾ ವೈರಸ್ ಮಂಗಳವಾರ ಮತ್ತೆ ಸೆಂಚುರಿ ಬಾರಿಸಿದೆ. ರಾಜ್ಯದಲ್ಲಿ ಭರ್ತಿ 100 ಹೊಸ ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಗರಿಷ್ಠ 20 ಹೊಸ ಪ್ರಕರಣಗಳು ಖಚಿತವಾಗಿವೆ. ಇನ್ನು ಯಾದಗಿರಿ 14, ಬೆಳಗಾವಿ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ 13, ದಾವಣಗೆರೆ 11, ಬೀದರ್ 10, ವಿಜಯಪುರ 5, ದಕ್ಷಿಣ ಕನ್ನಡ ಮತ್ತು ಉಡುಪಿ ತಲಾ 3, ಬೆಂಗಳೂರು ನಗರ ಹಾಗೂ ಕೋಲಾರದಲ್ಲಿ ತಲಾ 2, ಚಿಕ್ಕಬಳ್ಳಾಪುರ, ಕೊಪ್ಪಳ, ಬಳ್ಳಾರಿ ಮತ್ತು ಬಾಗಲಕೋಟೆಯಿಂದ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಒಟ್ಟು ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದ್ದರೆ, 1,514 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜತೆಗೆ ಇದೇ ಅವಧಿಯಲ್ಲಿ 17 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇವರಲ್ಲಿ 14 ಜನರು ಬೆಳಗಾವಿಯವರಾಗಿದ್ದಾರೆ. ಕಲಬುರಗಿ, ಚಿಕ್ಕಬಳ್ಳಾಪುರ ಮತ್ತು ಉತ್ತರ ಕನ್ನಡದ ತಲಾ ಒಬ್ಬರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 722ಕ್ಕೆ ಏರಿದೆ. ಇಲ್ಲಿಯವರೆಗೆ ಕರ್ನಾಟಕದಲ್ಲಿ ಸೋಂಕಿನಿಂದ 44 ಜನರು ಅಸುನೀಗಿದ್ದರೆ, ಇನ್ನಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 145,456 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 139,049 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,172 ಮಂದಿ ಮೃತಪಟ್ಟಿದ್ದಾರೆ. 60,706 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,603,587 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 348,194 ಜನರು ಮೃತಪಟ್ಟಿದ್ದಾರೆ 2,381,855 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail