ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಇಂದು ಮುಂದುವರಿಸಿದ್ದು 239 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.ಜತೆಗೆ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದು ಈವರೆಗೆ 63 ಮಂದಿ ಮೃತಪಟ್ಟಿದ್ದಾರೆ. ( ಅನ್ಯಕಾರಣದಿಂದ ಇಬ್ಬರ ಸಾವು).
ಇಂದು ಹೊಸದಾಗಿ ಪತ್ತೆಯಾದ 239 ಪ್ರಕರಣಗಳಲ್ಲಿ ಅಂತಾರಾಜ್ಯ ಪ್ರಯಾಣದ ಇತಿಹಾಸ ಹೊಂದಿದವರೆ ಹೆಚ್ಚಾಗಿದ್ದಾರೆ. ಕೆಲ ದಿನಗಳಿಂದ ಅತಿ ಹೆಚ್ಚು ಸೋಂಕಿತ ಪ್ರಕರಣದಿಂದ ಆತಂಕ ಮೂಡಿಸಿದ್ದ ಉಡುಪಿಯಲ್ಲಿ ಇಂದು ಸೋಂಕಿತರ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಭಾನುವಾರ 13 ಪ್ರಕರಣಗಳು ವರದಿಯಾಗಿವೆ.
ಇನ್ನುಳಿದಂತೆ ಕಲಬುರಗಿ ಮತ್ತು ಯಾದಗಿರಿಯಲ್ಲಿ ತಲಾ 39, ಬೆಳಗಾವಿಯಲ್ಲಿ 38, ಬೆಂಗಳೂರು 23, ದಕ್ಷಿಣ ಕನ್ನಡ ಮತ್ತು ದಾವಣಗೆರೆಯಲ್ಲಿ 17, ಉಡುಪಿಯಲ್ಲಿ 13, ಶಿವಮೊಗ್ಗದಲ್ಲಿ 12, ವಿಜಯಪುರದಲ್ಲಿ 9, ಬೀದರ್ ನಲ್ಲಿ 7, ಬಳ್ಳಾರಿಯಲ್ಲಿ 6, ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ತಲಾ 5, ಧಾರವಾಡದಲ್ಲಿ 3, ಗದಗ ಮತ್ತು ಉತ್ತರ ಕನ್ನಡದಲ್ಲಿ ತಲಾ 2, ಮಂಡ್ಯ, ರಾಯಚೂರಿನಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೆಂಗಳೂರಿನಲ್ಲಿ 61 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಇವರು ತೀವ್ರ ಉಸಿರಾಟದ ತೊಂದರೆಯಿಂದ ಮೇ 29ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಧುಮೇಹ, ರಕ್ತದೊತ್ತಡ, ಹೈಫೋ ಥೈರಾಡಿಸಮ್ ನಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂ.6ರಂದು ಇವರಿಗೆ ಸೋಂಕು ದೃಢಪಟ್ಟಿತ್ತು.
57 ವರ್ಷದ ಬೆಂಗಳೂರಿನ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದು, ಇವರು ಆನೆಕಾಲು ರೋಗ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಜೂ. 7ರಂದು ಮೃತಪಟ್ಟಿದ್ದರು. ಸಾವಿನ ಬಳಿಕ ಬಂದ ವರದಿಯಲ್ಲಿ ಸೋಂಕು ದೃಢಪಟ್ಟಿದೆ.
ಇದರಿಂದ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 63ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 143 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 2132 ಜನರು ಗುಣಮುಖರಾಗಿದ್ದು, 3257 ಸಕ್ರಿಯವಾಗಿದ್ದು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ 254,340 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 254,340 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 7,718 ಮಂದಿ ಮೃತಪಟ್ಟಿದ್ದಾರೆ. 122,738 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,028,578 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 403,083 ಜನರು ಮೃತಪಟ್ಟಿದ್ದಾರೆ 3,435,919 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail