NEWSಆರೋಗ್ಯನಮ್ಮರಾಜ್ಯ

ಜನನಿಬಿಡ ಸ್ಥಳಗಳಲ್ಲಿ ಕೊರೊನಾ ಸೋಂಕಿಗೆ ಕಡಿವಾಣ

ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ, ಕ್ರೀಡಾ  ಸಚಿವ ಸಿ.ಟಿ.ರವಿ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡಾ  ಸಚಿವ ಸಿ.ಟಿ. ರವಿ ತಿಳಿಸಿದರು.

ರಾಜ್ಯಾದ್ಯಂತ ಆರಂಭವಾಗಲಿರುವ ಹೋಟೆಲ್, ರೆಸ್ಟೋರೆಂಟ್, ಜಂಗಲ್ ಲಾಡ್ಜಸ್, ಕೆ.ಎಸ್.ಟಿ.ಡಿ.ಸಿ.  ಹೋಟೆಲ್‍ಗಳು ಅನುಸರಿಸಬೇಕಾದ ಕ್ರಮಗಳ ಮಾರ್ಗಸೂಚಿ ಪುಸ್ತಕವನ್ನು ಶನಿವಾರ ವಿಧಾನಸೌಧದಲ್ಲಿ   ಬಿಡುಗಡೆ ಮಾಡಿ ಮಾತನಾಡಿದರು.

ಜೂನ್ 8 ರಿಂದ ಹೋಟೆಲ್‍ಗಳು, ಆತಿಥ್ಯ ಘಟಕಗಳು, ಪ್ರವಾಸಿತಾಣಗಳನ್ನು ಸಾರ್ವಜನಿಕರಿಗೆ ತೆರೆಯಲು ತೀರ್ಮಾನಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇವುಗಳಿಗೆ ಕೆಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪ್ರವಾಸಿಗರಿಗೆ ಕೋವಿಡ್-19 ಸೋಂಕು ಹರಡದಂತೆ  ಮುಂಜಾಗ್ರತೆ ವಹಿಸಬೇಕು . ಈ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರವಾಸಿಗರಿಗೆ ಜಾಗೃತಿ ಮೂಡಿಸುವ ಅಗತ್ಯವಿದ್ದು, ಇಲಾಖೆಯು ಸಮಗ್ರ ಮಾರ್ಗ ಸೂಚಿಗಳನ್ನು ಪುಸ್ತಕಗಳ ರೂಪದಲ್ಲಿ ಹೊರತಂದಿದೆ ಎಂದರು

ಪ್ರವಾಸೋದ್ಯಮ ಕೇಂದ್ರವು ಸಂಪೂರ್ಣವಾಗಿ ನೆಲಕಚ್ಚಿದ್ದು, ಇದರಲ್ಲಿ ಸುಮಾರು 35 ಲಕ್ಷ ಮಂದಿ ಅವಲಂಬಿತರಿದ್ದಾರೆ.  ಪ್ರವಾಸೋದ್ಯಮ ಕ್ಷೇತ್ರ ಪುನರುಜ್ಜೀವನಗೊಳಿಸಿ , ಈ ಕ್ಷೇತ್ರವನ್ನು ಚೇತರಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದರು.

ಪ್ರವಾಸೋದ್ಯಮ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ “ ಅಗ್ರೀ ಟೂರಿಸಂ” ನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಸ್ಪಷ್ಟ ರೂಪುರೇಷೆ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರಾಥಮಿಕವಾಗಿ ಕರ್ನಾಟಕದ ಯಾವುದಾದರೂ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ಥಳೀಯರ ಸಹಭಾಗಿತ್ವದಲ್ಲಿ ಇದನ್ನು ಯಸಸ್ವಿಗೊಳಿಸಲಾಗುವುದು. ಇದರಿಂದ ನಗರ ವಾಸಿಗಳಿಗೆ ಕೃಷಿ ಚಟುವಟಿಕೆಗಳ ಅನುಭವ ಮೂಡಿಸುವುದರೊಂದಿಗೆ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.

ಶ್ರೀಮಂತ ಬಂಜಾರ ಸಂಸ್ಕøತಿಯನ್ನು ಪ್ರವಾಸಿಗರಿಗೆ ಪರಿಚಯಿಸುವ ದೃಷ್ಟಿಯಿಂದ ಕೊಪ್ಪಳದ ಬಹದ್ದೂರ ಬಾಂಡಾ ಸ್ಥಳದಲ್ಲಿ  ಬಂಜಾರ ಕಲ್ಚರಲ್ ಹೆರಿಟೇಜ್‍ನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಸ್ಥಾಪಿಸಲು  ಯೋಜನಾ ವರದಿ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ