NEWSನಮ್ಮರಾಜ್ಯ

ಜೂನ್‌ 7ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಲಾಕ್‌ ಡೌನ್ ‌ನಿಂದಾಗಿ ನಿನ್ನೆ ನಡೆಯಬೇಕಿದ್ದ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮ ಮುಹೂರ್ತ ಜೂನ್‌ 7ಕ್ಕೆ ಫಿಕ್ಸ್ ಆಗಿದ್ದು ಅಂದು ಪದಗ್ರಹಣಕ್ಕೆ ಬೇಕಾದ ಸಿದ್ದತೆ ನಡೆಯುತ್ತಿದೆ.

ಜೂನ್ 7 ರಂದು ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ.  ಅಂದು ಶಿವಕುಮಾರ್‌ಗೆ ದಿನೇಶ್ ಗುಂಡೂರಾವ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ಆಗಮಿಸಲಿದ್ದಾರೆ.ಕಳೆದ ಎರಡೂ ತಿಂಗಳ ಹಿಂದೆಯೇ ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ನೇಮಕಗೊಂಡಿದ್ದಾರೆ. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಇದ್ದ  ಕಾರಣ ಅಧಿಕಾರ ಸ್ವೀಕಾರ ಸಮಾರಂಭ ಆಯೋಜನೆ ಸಾಧ್ಯವಾಗಿರಲಿಲ್ಲ. ನಿನ್ನೆ ಆಯೋಜಿಸಿದ್ದ ಸಮಾರಂಭವು ಲಾಕ್‌ಡೌನ್‌ನಿಂದ ಮುಂದೂಡಲಾಗಿದೆ.

ಕೊರೊನಾ ಹತೋಟಿಗೆ ಬಂದರೆ ದೊಡ್ಡ ಮಟ್ಟದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚಿಂತಿಸಲಾಗಿತ್ತು. ಸಮಾರಂಭಕ್ಕೆ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಬೆಂಗಳೂರಿಗೆ ಕರೆಯಿಸಲು ಯೋಚಿಸಿದ್ದರು. ಆದರೆ ಕೊರೊನಾದಿಂದ  ಆ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಬದಿಗಿಟ್ಟು ಸರಳವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply