NEWSದೇಶ-ವಿದೇಶನಮ್ಮರಾಜ್ಯ

ರಾಜ್ಯಸಭಾ ಚುನಾವಣೆಗೆ ನಾಳೆ ದೊಡ್ಡಗೌಡರಿಂದ ನಾಮ ಪತ್ರ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

 ಬೆಂಗಳೂರು: ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ   ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ  ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ರಾಜ್ಯಸಭೆಗೆ ಸ್ಪರ್ಧೆ ಮಾಡುವಂತೆ ದೇವೇಗೌಡರನ್ನು ಒಪ್ಪಿಸುವುದು ಕಷ್ಟದ  ಕೆಲಸವಾಗಿತ್ತು ಎಂದು ಎಚ್ಡಿಕೆ ತಮ್ಮ ಟ್ವೀಟ್ಟರ್‌ನಲ್ಲಿ ತಿಳಿಸಿದ್ದಾರೆ.

ಪಕ್ಷದ ಶಾಸಕರು ಕಾಂಗ್ರೆಸ್ ಅಧ್ಯಕ್ಷೆ  ಮತ್ತು ರಾಷ್ಟ್ರೀಯ ಹಲವು ನಾಯಕರ ಮನವಿ ಮೇರೆಗೆ  ದೇವೇಗೌಡರು ರಾಜ್ಯಸಭೆ ಚುನಾವಣೆ  ಸ್ಪರ್ಧೆಗೆ ನಿರ್ಧರಿಸಿದ್ದಾರೆ.

ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ