ಬೆಂಗಳೂರು:ಸರ್ಕಾರದ ಖಜಾನೆ ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಲು ಮುಂದಾಗಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಸೂಚನೆ ನೀಡಿದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ನೂತನ ಮರಳು ನೀತಿ ಜಾರಿ ಮತ್ತು ನಿಯಮಗಳ ರಚನೆ, ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ವಲಯಗಳಲ್ಲಿ ಆಗಬೇಕಾದ ಅಗತ್ಯದ ಕಾರ್ಯಗಳು, ಇಲಾಖೆಯಿಂದ ಸರ್ಕಾರಕ್ಕೆ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಕೊಳ್ಳಬೇಕು. ಲಾಕ್‌ಡೌನ್ ಸಡಿಲಿಸಿದ ಹಿನ್ನೆಲೆಯಲ್ಲಿ ಗೃಹ ಮತ್ತು ವಾಣಿಜ್ಯ ಕಟ್ಟಡಗಳ ನಿರ್ಮಾಣದಲ್ಲಿ ಹೆಚ್ಚಲಿರುವ ಮರಳು ಬೇಡಿಕೆಯನ್ನು ಸೂಕ್ತವಾಗಿ ನಿಭಾಯಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ಎಂಟು ತಿಂಗಳ ಅವಧಿಯಲ್ಲಿಇಲಾಖೆಯು ರಾಜ್ಯದ ರಾಜಸ್ವ ಹೆಚ್ಚಿಸುವ ನಿಟ್ಟಿನಲ್ಲಿ ನೂತನ ಮರಳು ನೀತಿ ಸೇರಿದಂತೆ ಕೈಕೊಂಡ ಹಲವಾರು ಅಭಿವೃದ್ಧಿ ಕಾರ್ಯಗಳ ಹಾಗೂ ಮುಖ್ಯ ಮತ್ತು ಉಪ ಖನಿಜಳಿಗೆ ಸಂಬಂಧಿಸಿದ ಕಾಯ್ದೆಗೆ ತರಲಾದ ತಿದ್ದುಪಡಿ ಕುರಿತು ಸಚಿವ ಸಿ.ಸಿ.ಪಾಟೀಲ್ ಸಿಎಂಗೆ ವಿವರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಾರ್ಮಿಕ ಹಾಗೂ ವಾರ್ತಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಎಂ ಮಹೇಶ್ವರ ರಾವ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕ ಡಾ. ಶಿವಶಂಕರ್ ಭಾಗವಹಿಸಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail