NEWSಉದ್ಯೋಗದೇಶ-ವಿದೇಶರಾಜಕೀಯ

12 ಕೋಟಿ ರೂ.ವೆಚ್ಚದಲ್ಲಿ ಸಮಾಲೋಚಕರ ನೇಮಕ : ಸಚಿವ ಮಾಧುಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಕರ್ನಾಟಕದಲ್ಲಿ ಹೂಡಿಕೆದಾರರನ್ನು ಉತ್ತೇಜಿಸುವ ಸಲುವಾಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಆಫ್ ಇಂಡಿಯಾ ಪ್ರೆವೇಟ್ ಕಂಪನಿಯನ್ನು 12 ಕೋಟಿ ರೂ. ವೆಚ್ಚದಲ್ಲಿ 12 ತಿಂಗಳ ಅವಧಿಗೆ  ಸಮಾಲೋಚಕರನ್ನಾಗಿ  ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಇಂದು ವಿಧಾನಸೌಧದ  ಸಮ್ಮೇಳನ ಸಬಾಂಗಣದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಂಪನಿಗೆ 12 ಕೋಟಿ ರೂ. ಜತೆಗೆ ಜಿಎಸ್‍ಟಿ ನೀಡಲಾಗುವುದು.  ಅವರು 12 ತಿಂಗಳಲ್ಲಿ ನಮ್ಮ ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಉದ್ದಿಮೆಗೆ ಕರೆತರಬೇಕು ಎನ್ನುವ ಉದ್ದೇಶದಿಂದ ನೇಮಕ ಮಾಡಲಾಗಿದೆ ಎಂದರು.

ಇ ಆಡಳಿತದಲ್ಲಿ  ಇ ಸಂಗ್ರಹಣೆಯ ಎರಡು ಯೋಜನೆಗಳನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಮೆ: ಇಐಟಿ ಸರ್ವೀಸಸ್ ಇಂಡಿಯಾ ಲಿಮಿಟೆಡ್ ಇವರಿಗೆ 184.37 ಕೋಟಿ ನೀಡಲಾಗಿದೆ ಎಂದರು.

ಐದು ವಿದ್ಯುತ್ ಕಂಪನಿಗಳಿಗೆ 2500 ಕೋಟಿ ರೂ.ಗಳ ಬಡ್ಡಿ ರಹಿತ ಸಾಲ ಮಂಜೂರು ಮಾಡಲಾಗಿದೆ. ಇದರಲ್ಲಿ  ಬೆಂಗಳೂರು ವಿದ್ಯುತ್ ಕಂಪನಿಗೆ  500, ಹುಬ್ಬಳ್ಳಿ 400, ಗುಲ್ಬರ್ಗ 1000, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ 600 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ

ವಾಣಿಜ್ಯ ಮತ್ತು ಕೈಗಾರಿಕಾ ಆಡಳಿತ ವ್ಯಾಪ್ತಿಯಲ್ಲಿದ್ದ  ಕವಿಕ ಮತ್ತು ಎಮ್‍ಎಐ ಎಲೆಕ್ಟ್ರಿಕ್  ಕಂಪನಿ ಆಡಳಿತವನ್ನು ಇಂಧನ ಇಲಾಖೆಯ ವ್ಯಾಪ್ತಿಗೆ ತರಲು ತೀರ್ಮಾನಿಸಲಾಯಿತು ಎಂದರು.

ಸಾದಿಲ್ವಾರು ಬಿಲ್ಲಿನಲ್ಲಿ 80 ಕೋಟಿ ವರೆಗೆ ಖರ್ಚು ಮಾಡಲು ಅವಕಾಶವಿತ್ತು.  ಈಗ ಕೋವಿಡ್-19 ರಿಂದ  ಕೆಲವು ವರ್ಗದ ಜನರಿಗೆ  ತಕ್ಷಣ ಪರಿಹಾರ ಒದಗಿಸುವ ಉದ್ದೇಶದಿಂದ  ಸಾದಿಲ್ವಾರು ನಿಧಿ ಮೊತ್ತವನ್ನು ಒಂದು ಬಾರಿಗೆ 500 ಕೋಟಿ ವರೆಗೆ ವೆಚ್ಚ  ಮಾಡಲು ತೀರ್ಮಾನಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಪೀಠೋಪಕರಣಗಳ ಖರೀದಿಗೆ  81.99 ಕೋಟಿ ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ ಅಲ್ಲದೆ, ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ವೈದ್ಯಕೀಯ ಅನಿಲ ಪೈಪ್ ಲೈನ್ ಜೊತೆಗೆ ಅತಿ ವೇಗದ  ಆಮ್ಲಜನಕ ಉಪಕರಣ ಅಳವಡಿಸಲು ಹಾಗೂ ತುರ್ತು ಹಾಸಿಗೆಗಳಿಗಾಗಿ ಸರ್ಕಾರದ ವತಿಯಿಂದ   207 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದರು

ವಿಜಯಪುರದಲ್ಲಿ ಏರ್‍ಪೋರ್ಟ್ ನಿರ್ಮಾಣ ಮಾಡಲು 220 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.  ಎಪಿಎಂಸಿಯಲ್ಲಿ ಈ ಹಿಂದೆ ವಿಧಿಸುತ್ತಿದ್ದ ಶೇಕಡ 1.5 ರಷ್ಟು ಮಾರುಕಟ್ಟೆ ಶುಲ್ಕವನ್ನು ಶೇ 1ಕ್ಕೆ ಇಳಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಒಬ್ಬ ಸದಸ್ಯರ ಹುದ್ದೆ ತೆರವಾಗುತ್ತಿದ್ದು ಅದನ್ನು ತುಂಬಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲಾಗಿದೆ.

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪೀಠೋಪಕರಣ ಖರೀದಿಗೆ 12.8 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ  ಎಂದರು.

ಕರ್ನಾಟಕ ಲೋಕಾಯುಕ್ತ ಆಯಕ್ಟ್ ಗೆ ತಿದ್ದುಪಡಿ ತರಲಾಗಿದೆ. 90 ದಿನದಲ್ಲಿ ಯಾವುದೇ ಪ್ರಕರಣ ದಾಖಲಾದ್ರೂ ಬಗೆಹರಿಸಬೇಕು. ಬಿ-ರಿಪೋರ್ಟ್ 6 ತಿಂಗಳಲ್ಲಿ ಸಲ್ಲಿಸಬೇಕು ಎಂದು  ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

 

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...