ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ ನಾಯಕ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ನೆಹರು ಅವರ 56ನೇ ಸಂಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿ ಮಾತನಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ನೆಹರು ಒಬ್ಬ ರಾಜಕಾರಣಿಯಾಗಿ ಅಷ್ಟೇ ಗುರುತಿಸಿಕೊಳ್ಳದೆ ಸಾಹಿತಿ ಹಾಗೂ ಇತಿಹಾಸಕಾರರಾಗಿಯೂ ಹೆಸರು ಮಾಡಿದ್ದಾರೆ. ಇನ್ನು ಅವರು ಬಳುವಳಿಯಾಗಿ ಬಿಟ್ಟು ಹೋಗಿರುವ ಅಭಿವೃದ್ಧಿ ಪರಿಕಲ್ಪನೆ ಮತ್ತು ರಾಷ್ಟ್ರ ನಿರ್ಮಾಣದ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಶ್ರದ್ಧಾಂಜಲಿ ಅರ್ಪಿಸೋಣ ಎಂದು ತಿಳಿಸಿದರು.
ಪಂಚವಾರ್ಷಿಕ ಯೋಜನೆಗಳ ಮೂಲಕ 20 ವರ್ಷಗಳ ಪರಿಪೂರ್ಣ ಪ್ರಗತಿ ಸಾಧಿಸಬಹುದೆಂದು ಕನಸು ಕಂಡ ಮಹಾನ್ ನೇತಾರ ಜತೆಗೆ ಅದನ್ನು ಸಾಧಿಸುವಲ್ಲಿ ಅನೇಕ ಉಪಕ್ರಮಗಳನ್ನು ಕೈಗೊಡಿದ್ದರು. ಅವರಂತೆ ನಾವು ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ನಾಡಿನ ಸಮಸ್ತ ಜನತೆಗೆ ಕರೆ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail