NEWSನಮ್ಮರಾಜ್ಯಸಿನಿಪಥ

ಸ್ಯಾಂಡಲ್‌ವುಡ್‌ನ ಮತ್ತೊಬ್ಬ ಹಾಸ್ಯ ನಟ ಮೈಕೆಲ್‌ ಮಧು ಇನ್ನಿಲ್ಲ

ಕನ್ನಡ ಸಿನಿಮಾ ಪ್ರಿಯರನ್ನು ನಕ್ಕು ನಗಿಸುತ್ತಿದ್ದ ಜೀವ ನಂದಿತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಾಸ್ಯನಟ ಮೈಕೆಲ್ ಮಧು ಬುಧವಾರ ಕೊನೆ ಉಸಿರೆಳೆದಿದ್ದಾರೆ. ಬೆಳಗ್ಗೆ ಮನೆಯಲ್ಲಿ ಜ್ಞಾನ ತಪ್ಪಿ ಬಿದ್ದಿದ್ದ ನಟ ಮೈಕೆಲ್ ಮಧು ಅವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು‌‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೈಕೆಲ್ ಮಧು ಮೃತಪಟ್ಟಿದ್ದಾರೆ.

ಇತ್ತೀಚೆಗೆ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರನ್ನು ಕಳೆದುಕೊಂಡಿದ್ದ ಚಿತ್ರರಂಗಕ್ಕೆ  ಈ ಮೂಲಕ ಮತ್ತೊಂದು ಶಾಕ್ ಎದುರಾಗಿದೆ. ತಮ್ಮ ಪಾತ್ರಗಳಿಂದಲೇ ನಕ್ಕು ನಗಿಸ್ತಿದ್ದ ಮತ್ತೊಬ್ಬ ಹಾಸ್ಯ ನಟನ ಇಹಲೋಕ ಯಾತ್ರೆಗೆ 2020 ಬ್ರೇಕ್ ಹಾಕಿದೆ ಮೈಕೆಲ್ ಮಧು ಅವರಿಗೆ  50 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು   ಅಗಲಿದ್ದಾರೆ. ಕನ್ನಡ ಚಿತ್ರರಂಗದ ಎವರ್ ಗ್ರೀನ್ ಹಿಟ್ ಓಂ ಸಿನಿಮಾ ಮೂಲಕ ಮೈಕೆಲ್ ಮಧು ಚಿತ್ರ ಜೀವನ ಪ್ರಾರಂಭವಾಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕಳೆದ ಎರಡೂವರೆ ದಶಕಗಳಿಂದ ಕನ್ನಡದ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೈಕಲ್‌ ಮಧು ವಿವಿಧ ಹಾಸ್ಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ಬಹುತೇಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳನ್ನೇ ಮೈಕೆಲ್‌ಮಧು ನಿರ್ವಹಿಸಿದ್ದಾರೆ. ಇತ್ತೀಚಿಗೆ ಗೋಸಿ ಗ್ಯಾಂಗ್ ಎಂಬ ಚಿತ್ರದಲ್ಲಿ ಅಭಿನಯಿಸಿದ್ದರು. ಸೂರ್ಯವಂಶ, ಯಜಮಾನ, ಎ.ಕೆ.47, ಭಜರಂಗಿ, ಎ, ನಂತಹ ಸೂಪರ್ ಹಿಟ್ ಚಿತ್ರಗಳಲ್ಲಿ  ತಮಗೆ ಸಿಕ್ಕ ಸಣ್ಣ ಸಣ್ಣ ಪಾತ್ರಗಳಲ್ಲಿಯೇ ಗಮನ ಸೆಳೆದಿದ್ದರು.

ಓಂ, ಲವ್ ಟ್ರೇನಿಂಗ್ ಸ್ಕೂಲ್, ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು, ಪಾಪಿಗಳ ಲೋಕದಲ್ಲಿ, ಮಿನುಗು ತಾರೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕಾಶಿನಾಥ್ ಅವರ ನಿರ್ದೇಶನದ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ ಮೈಕಲ್ ಮಧು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ನೃತ್ಯ ನಿರ್ದೇಶಕ ಆಗಬೇಕು ಎಂದು ಕನಸು ಕಂಡಿದ್ದರು
ನಟ ಆಗುವುದಕ್ಕೂ ಮುನ್ನ ನೃತ್ಯ ನಿರ್ದೇಶಕ ಆಗಬೇಕು ಎಂದು ಮೈಕೆಲ್‌ ಮಧು ಕನಸು ಕಂಡಿದ್ದರು. ಅವರು ಚೆನ್ನಾಗಿ ಡ್ಯಾನ್ಸ್‌ ಮಾಡುತ್ತಾರೆ ಎಂಬ ಕಾರಣಕ್ಕೇ ಅವರ ಹೆಸರಿನ ಜೊತೆ ‘ಮೈಕೆಲ್‌’ ಸೇರಿಕೊಂಡಿತ್ತು. ಆದರೆ ಅವರ ಡ್ಯಾನ್ಸ್ ಉತ್ಸಾಹಕ್ಕೆ ಪ್ರೋತ್ಸಾಹ ಸಿಗದ ಕಾರಣ ನೃತ್ಯ ನಿರ್ದೇಶಕನಾಗುವ ಕನಸಿಗೆ ವಿದಾಯ ಹೇಳಿ ನಟನೆಯತ್ತ ಗಮನ ಹರಿಸಿದರು.

‘ಸಿಂಗಾರಿ ಬಂಗಾರಿ’ ಚಿತ್ರದಲ್ಲಿ ಚಿಕ್ಕ ಪಾತ್ರ ಮಾಡಿದ್ದ ಮೈಕೆಲ್‌ ಮಧು, ನಂತರ ಹಲವಾರು ಅವಕಾಶಗಳನ್ನು ಪಡೆದುಕೊಂಡರು. ಇತ್ತೀಚೆಗೆ ಚಿತ್ರರಂಗದಿಂದ ಕೊಂಚ ದೂರ ಆಗಿದ್ದರು. ಅವಕಾಶಗಳ ಕೊರತೆ ಅವರನ್ನು ಕಾಡಿತ್ತು.

ಕನ್ನಡ ಚಿತ್ರರಂಗದ ಹಲವು ಸ್ಟಾರ್‌ ನಟರ ಜೊತೆ ಅಭಿನಯಿಸುವ ಮೂಲಕ ಮೈಕೆಲ್‌ ಮಧು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು. ಮೈಕೆಲ್‌ ಮಧು ಅವರ್‌ ಮೃತ ದೇಹವನ್ನು ಗುರುವಾರ (ಇಂದು) ಕಿಮ್ಸ್‌ ಆಸ್ಪತ್ರೆಯು ಕುಟುಂಬದವರಿಗೆ ಒಪ್ಪಿಸಲಿದ್ದು, ಬಳಿಕ ಅಂತ್ಯಕ್ರಿಯೆ ನೆರವೇರಲಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ