ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಲಾಕ್ ಡೌನ್ ಕಾರಣದಿಂದ ವಿಳಂಬವಾಗಲು ಬಿಡುವುದಿಲ್ಲ ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಹೇರಲಾಗಿದ್ದು, ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಮಾಡುವುದನ್ನು ಮುಂದೂಡಲಾಗಿತ್ತು. ಆದರೆ ಮೌಲ್ಯಮಾಪಕರಿಗೆ ಮೌಲ್ಯಮಾಪನ ಮಾಡಲು ಲಾಕ್ ಡೌನ್‌ನಿಂದ ಈಗ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನವನ್ನು ಸ್ಥಗಿತಗೊಳಿಸಲಾಗುವುದು ಎಂದು ಜುಲೈ 12ರಂದು ಹೇಳಿಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು. ಈಗ ಸರ್ಕಾರ ಮೌಲ್ಯಮಾಪಕರಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಿದೆ. ಶಿಕ್ಷಕರಿಗೆ ಮೌಲ್ಯಮಾಪನ ಕೇಂದ್ರಕ್ಕೆ ಬರಲು ಶಿಕ್ಷಣ ಇಲಾಖೆ ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನಕ್ಕೆ ಯಾವುದೇ ತೊಡಕಿಲ್ಲದೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ.