NEWSಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಿನಾಯಿತಿ: ಕ್ವಾರಂಟೈನ್ ನಲ್ಲಿರುವ ವಿದ್ಯಾರ್ಥಿಗಳು ನಿರಾಳ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ  ಸೋಂಕು ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳಿಗೆ ಜೂನ್ 25 ರಂದು ನಡೆಯುವ ಪರೀಕ್ಷೆಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗುವುದು. ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಪೂರಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದರುವ ಅವರು, ವಿದ್ಯಾರ್ಥಿಯ ಪಾಲಕರು ಅಥವಾ ಸಂಬಂಧಿಕರು ಸಹ ಕ್ವಾರಂಟೈನ್ ನಲ್ಲಿದ್ದರೆ ಅಂತಹ ಪ್ರಕರಣಗಳನ್ನು ಪೂರ್ವಭಾವಿಯಾಗಿ ಪತ್ತೆ ಹಚ್ಚಲು ಆರೋಗ್ಯ ಇಲಾಖೆಯ ಸಹಕಾರ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಇಲಾಖೆಯ ದಾಖಲೆ ದತ್ತಾಂಶಗಳೊಂದಿಗೆ ತಾಳೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿಯ ಪರೀಕ್ಷೆಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗುವುದು. ಜತೆಗೆ ಯಾವುದೇ ಸಮಸ್ಯೆ ಉದ್ಭವವಾಗದಂತೆ ಎಲ್ಲಾ ರೀತಿಯ ಪೂರ್ವಭಾವಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ದ್ವಿತೀಯ ಪಿಯು ಆಂಗ್ಲ ಮಾಧ್ಯಮ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು ಅಭಿನಂದನೆ ಸಲ್ಲಿಸುತ್ತೇನೆ. ಪಿಯು ಪರೀಕ್ಷೆಯಲ್ಲಿ ಸಾರ್ವಜನಿಕ ಅಂತರ ಕಾಯ್ದುಕೊಳ್ಳದ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಮತ್ತು ಸಂಬಂಧಿಸಿದ  ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ