NEWSನಮ್ಮರಾಜ್ಯಶಿಕ್ಷಣ-

ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಹೊತ್ತಿನಲ್ಲಿ SSLC- PUC ಪರೀಕ್ಷೆ ಬೇಡ

ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಪತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ  ಹೆಚ್ಚುತ್ತಿದೆ. ಇಂಥ  ಪರಿಸ್ಥಿತಿಯಲ್ಲಿ SSLC  ಮತ್ತು PUC ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂದು ಶಿಕ್ಷಣ ತಜ್ಞ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ ಶಿಕ್ಷಣ ಸಚಿವರಿಗೆ ಸಲಹೆ ನೀಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ರೀ ಕುರಿತು ಸುದೀರ್ಘವಾದ  ಪತ್ರ ಬರೆದಿರುವ ಅವರು, ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಕೊರೊನಾ  ಸೋಂಕು ನಿಯಂತ್ರಣದಲ್ಲಿತ್ತು. ಆದರೆ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ಮುಂಬೈ ಮತ್ತು ವಿದೇಶಗಳಿಂದ ಜನರು ವಾಪಸ್‌ ಬಂದಿದ್ದರ ಹಿನ್ನೆಲೆಯಲ್ಲಿ ಸೋಂಕಿತರ ಪ್ರಮಾಣ ಏರುಗತಿಯಲ್ಲಿ ಸಾಗುತ್ತಿದೆ. ಈ ವೇಳೆ ಪರೀಕ್ಷೆಗೆ ಮಕ್ಕಳು ಹಾಜರಾದರೆ ಆರೋಗ್ಯ ಹದಗೆಡಲಿದೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಈ ಹಿಂದೆ ಪರಿಸ್ಥಿತಿ ಹತೋಟಿಯಲ್ಲಿತ್ತು. ಹಾಗಾಗಿ ಸೂಕ್ತ ಪೂರ್ವಸಿದ್ದತೆಯೊಂದಿಗೆ ಪರೀಕ್ಷೆ ನಡೆಸಬಹುದು ಎಂದು ನಾವು ಸಲಹೆ ನೀಡಿದ್ದೆವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಯಾವ ಕಾರಣಕ್ಕೂ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆ ನಡೆಸಿ ಈ  ಆಪತ್ತಿಗೆ  ಮಕ್ಕಳನ್ನು ದೂಡಿ ಅವರ ಆರೋಗ್ಯಕ್ಕೆ ಕುತ್ತು ತರುವುದು ಅಮಾನವೀಯ ನಡೆಯಾಗುತ್ತದೆ. ಆದ್ದರಿಂದ ಸದ್ಯ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ವಿವರಿಸಿದ್ದಾರೆ.

SSLC ಪರೀಕ್ಷೆಯನ್ನು ಜೂನ್ 25ರಿಂದ ನಡೆಸಲು ಸರ್ಕಾರ ನಿರ್ಧರಿಸಿದೆ. ಬಾಕಿ ಉಳಿದಿರುವ ಪಿಯುಸಿಯ ಒಂದು ಪರೀಕ್ಷೆ ಜೂನ್ 18ರಂದು ನಡೆಸಲು ಶಿಕ್ಷಣ ಇಲಾಖೆ ಈಗಾಗಲೇ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply