NEWSನಮ್ಮರಾಜ್ಯರಾಜಕೀಯ

ಕೊರೊನಾ ವಿಚಾರದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಸರ್ಕಾರ: ಸಿದ್ದು ಗುದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ವಿರೋಧ ಪಕ್ಷದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಅಧಿವೇಶನ ಕರೆದು ಚರ್ಚಿಸಿ ಕೊರೊನಾ ನಿಯಂತ್ರಣಕ್ಕೆ ಒಟ್ಟಾಗಿ ಶ್ರಮಿಸೋಣ ಎಂದರೆ ಅದನ್ನೂ ಮಾಡುತ್ತಿಲ್ಲ. ಸರ್ಕಾರದ ಈ ಧೋರಣೆಯಿಂದ ರಾಜ್ಯದ ಜನ ಕಷ್ಟ ಅನುಭವಿಸುವಂತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೊರೊನಾ ಆರಂಭವಾದಾಗಿಂದ ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೇವೆ. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಕಣ್ಣೆದುರೇ ಭ್ರಷ್ಟಾಚಾರ ನಡೆದರೂ ಪ್ರತಿಪಕ್ಷವಾಗಿ ಸುಮ್ಮನೆ ಕೂರಬೇಕೇ? ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸುವುದು ಕೆಟ್ಟ ರಾಜಕಾರಣವಾದರೆ, ಒಳ್ಳೆ ರಾಜಕಾರಣ ಯಾವುದು ಅಂತ ಅವರೇ ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.

ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಕೊರೊನಾ ಆರೈಕೆ ಕೇಂದ್ರ ನಿರ್ಮಾಣ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದರೆ ಇದರಿಂದ ಸಾಕಷ್ಟು ಅನುಕೂಲವಾಗುತ್ತಿತ್ತು. ಇಂಥದ್ದೊಂದು ವ್ಯವಸ್ಥೆ ನಿರ್ಮಾಣ ಮಾಡುವಂತೆ ಮಾರ್ಚ್ ತಿಂಗಳಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲೇ ನಾವು ಸರ್ಕಾರಕ್ಕೆ ಸಲಹೆ ನೀಡಿದ್ದೆವು ಆದರೆ ಆಗಿರುವುದು ಏನು ಎಂದು ಪ್ರಶ್ನಿಸಿದ್ದಾರೆ.

ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಸಿದ್ಧವಾಗುತ್ತಿರುವ ಕೊರೊನಾ ಚಿಕಿತ್ಸಾ ಕೇಂದ್ರಕ್ಕೆ ಅಗತ್ಯವಿರುವ 1800 ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಹಾಗೆಯೇ ಹಾಸಿಗೆ, ಮಂಚ ಖರೀದಿ ಪ್ರಕ್ರಿಯೆಯಲ್ಲೂ ಸಾಕಷ್ಟು ಗೊಂದಲವಿದೆ. ಇದರಿಂದ ಇನ್ನಷ್ಟು ವಿಳಂಬವಾಗಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ