NEWSನಮ್ಮರಾಜ್ಯ

ಕೊರೊನಾಗೆ 115ಮಂದಿ ಬಲಿ, ರಾಜ್ಯದಲ್ಲಿ 3693ಜನರನ್ನು ಸುತ್ತಿಕೊಂಡ ವೈರಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಮರಣ ಮೃದಂಗ ಭಾರಿ ಪ್ರಮಾಣದಲ್ಲಿ ಮುಂದುವರಿಸುತ್ತಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 115 ಮಂದಿಯನ್ನು ಬಲಿಪಡೆದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,153ಕ್ಕೆ (ಅನ್ಯಕಾರಣಕ್ಕೆ 6ಮಂದಿ ಸೇರಿ)  ಏರಿಕೆಯಾಗಿದೆ.

ಕೊರೊನಾಗೆ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 75 ಸೋಂಕಿತರು ಸೇರಿ ರಾಜ್ಯದಲ್ಲಿ ಒಟ್ಟು 115 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,208 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3,693 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55,115ಕ್ಕೇರಿಕೆಯಾಗಿದೆ.

24 ಗಂಟೆಗಳಲ್ಲಿ 1,028 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 33,205 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...