ಬೆಂಗಳೂರು: ವಿಶ್ವ ಮಾರಿ ಕೊರೊನಾ ಭಾನುವಾರವೂ ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4,120 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 63,772ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 91 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,337ಕ್ಕೆ (ಅನ್ಯ ಕಾರಣಕ್ಕೆ 6ಸೇರಿ) ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 36 ಮಂದಿ ಸೇರಿ ರಾಜ್ಯದಲ್ಲಿ ಒಟ್ಟು 91 ಮಂದಿ ಮೃತಪಟ್ಟಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2156 ಪ್ರಕರಣಗಳು ಸೇರಿ ರಾಜ್ಯದಲ್ಲಿ ಒಟ್ಟು 4120 ಮಂದಿಗೆ ಸೋಂಕು ದೃಢಪಟ್ಟಿದೆ.
ಇಂದು 1290 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 39,370 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ 24,316 ಮಂದಿ ಸೋಂಕಿನಿಂದ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ 1,086,476 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 1,086,476 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 26,951 ಮಂದಿ ಮೃತಪಟ್ಟಿದ್ದಾರೆ. 684,662 ಮಂದಿ ರೋಗಮುಕ್ತರಾಗಿದ್ದಾರೆ. 374,863 ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಪಂಚಾದ್ಯಂತ ಈವರೆಗೆ 14,468,262 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 605,833 ಜನರು ಮೃತಪಟ್ಟಿದ್ದಾರೆ. 8,649,654 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. 5,212,775 ಮಂದಿ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail