NEWSದೇಶ-ವಿದೇಶನಮ್ಮರಾಜ್ಯರಾಜಕೀಯ

MSME ಉದ್ದಿಮೆದಾರರ ಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ  ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಟ್ವಿಟರ್‌ ಮೂಲಕ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ MSME ಗಳಿಗೆ ಕೇಂದ್ರ ಸರ್ಕಾರದ  ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಸುಮಾರು  6 ಲಕ್ಷಕ್ಕೂ  ಹೆಚ್ಚುಮಂದಿ MSME ಉದ್ದಿಮೆದಾರರು ನೋದಾಯಿಸಿಕೊಂಡಿದ್ದು, ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳೆ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್  ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...