NEWSಉದ್ಯೋಗನಮ್ಮರಾಜ್ಯರಾಜಕೀಯಶಿಕ್ಷಣ-

ಕೆಪಿಎಸ್‌ಸಿ ಏನನ್ನೋ ಬಚ್ಚಿಡಲು ಯತ್ನಿಸುತ್ತಿದೆ ಎಂಬ ಗುಮಾನಿ: ಸಿದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2015ರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿಯನ್ನು ನೀಡಲು  ನಿರಾಕರಿಸುತ್ತಿರುವುದು ಸರಿಯಲ್ಲ. ಇದರಿಂದಾಗಿ ಕೆಪಿಎಸ್‌ಸಿ ಏನನ್ನೋ ಬಚ್ಚಿಡಲು ಪ್ರಯತ್ನಿಸುತ್ತಿದೆ ಎಂಬ ಗುಮಾನಿ‌ ಮೂಡಲು ಕಾರಣವಾಗಿದೆ  ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಉತ್ತರ ಪತ್ರಿಕೆಯ ಪ್ರತಿಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ನೀಡಿದೆ. ಕರ್ನಾಟಕ ಲೋಕಸೇವಾ ಆಯೋಗ ಕೂಡಾ ಇಂತಹದ್ದೇ ಆದೇಶ ನೀಡಿದೆ. ಹೀಗಿರುವಾಗ ಕೆಪಿಎಸ್‌ಸಿ ವಿನಾಕಾರಣ ಅಭ್ಯರ್ಥಿಗಳನ್ನು ಸತಾಯಿಸುತ್ತಿರುವುದು ಸರಿ ಅಲ್ಲ. ತಕ್ಷಣ ಅವರಿಗೆ ಉತ್ತರ ಪತ್ರಿಕೆಯ ಪ್ರತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...