NEWSನಮ್ಮಜಿಲ್ಲೆ

ಮೈಸೂರು ಯೋಗಲಕ್ಷ್ಮೀ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಬಾಂಡ್‌ ರೂಪದ ಠೇವಣಿ

ಮಹಾನಗರ ಪಾಲಿಕೆ ಬಜೆಟ್ ಮಂಡನೆಯಲ್ಲಿ ಅಧ್ಯಕ್ಷೆ ಕೆ.ನಿರ್ಮಲಾ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಮೈಸೂರು ಮಹಾನಗರ ಪಾಲಿಕೆಯ 2020-21 ನೇ ಸಾಲಿನ ಆಯವ್ಯಯವನ್ನು ತೆರಿಗೆ ನಿರ್ಧರಣಾ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ನಿರ್ಮಲಾ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಸೋಮವಾರ ಮಂಡಿಸಿದರು.

ಒಟ್ಟು 87879.99ಲಕ್ಷ ರೂ. ಗಳ ಗಾತ್ರದ ಬಜೆಟ್ ಮಂಡಿಸಿದ ಅವರು, ಪ್ರಾರಂಭ ಶಿಲ್ಕು 26008.72 ಲಕ್ಷ ರೂ. ಜಮೆಗಳು 61871.27 ಲಕ್ಷ ರೂ. ಆಗಿದ್ದು, ಅದರಲ್ಲಿ ಪಾವತಿಗಳು 87143.34 ಲಕ್ಷ ರೂ.ಗಳು ಹಾಗೂ ಆಖೈರು ಶಿಲ್ಕು 736.65 ಲಕ್ಷ ರೂ. ಗಳಾಗಿರುತ್ತದೆ ಎಂದು ಆಯವ್ಯಯ ಮಂಡನೆ ಸಭೆಯಲ್ಲಿ ಮಂಡಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕೊವೀಡ್-19 ಹಿನ್ನೆಲೆ ನಗರದ ಬಡ ಜನತೆಗೆ ಅವಶ್ಯಕವಿರುವ ಮಾಸ್ಕ್, ಸ್ಯಾನಿಟೈಸರ್ ಹಾಗೂ ಆಹಾರ ಸಾಮಾಗ್ರಿಗಳನ್ನು ಖರೀದಿಸಿ ವಿತರಿಸಲು ಪ್ರತಿ ವಾರ್ಡ್‍ವಾರು ರೂ. 10 ಲಕ್ಷಗಳ ಅನುದಾನವನ್ನು ನೀಡಲಾಗಿದೆ. ಈಗಾಗಲೇ ಪ್ರತಿ ವಾರ್ಡ್‍ಗೆ ಪ್ರಸ್ತುತ ರೂ. 1 ಲಕ್ಷದಂತೆ ವಲಯ ಆಯುಕ್ತರಿಗೆ ಬಿಡುಗಡೆಗೊಳಿಸಲಾಗಿದೆ. ಈ ಉದ್ದೇಶಕ್ಕಾಗಿ 650 ಲಕ್ಷಗಳನ್ನು ಕಾಯ್ದಿರಿಸಲಾಗಿದೆ.

ವಿದ್ಯಾರಣ್ಯಪುರಂ ಸಿವೇಜ್ ಫಾರಂನಲ್ಲಿರುವ ಸುಮಾರು 20 ಎಕರೆ ಪ್ರದೇಶದಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಬಯೋ ರೆಮಿಡಿಯೇಷನ್ ವಿಕೇಂದ್ರಿಕೃತ ಶೂನ್ಯ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಸಂಸ್ಕರಿಸಲು ನಿಧರಿಸಲಾಗಿದ್ದು, ಈ ಉದ್ದೇಶದ ಮೂಲ ಸೌಕರ್ಯ ನಿರ್ಮಾಣಕ್ಕಾಗಿ ರೂ. 200 ಲಕ್ಷಗಳನ್ನು ನೀಡಲಾಗಿದೆ. ಅಲ್ಲದೆ, ಆ ಜಾಗದಲ್ಲಿ ಸುಂದರ ಉದ್ಯಾನವನ್ನು ನಿರ್ಮಿಸಲು ಪಾಲಿಕೆ ಚಿಂತಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ನಗರದ ಹೃದಯಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯನ್ನು ನಗರದ ಸೌಂದರ್ಯ ವೃದ್ಧಿಸಲು ಹಾಗೂ ಅಂತರರಾಷ್ಟ್ರೀಯ ಮಟ್ಟದ ರಸ್ತೆಯನ್ನಾಗಿಸಲು ರೂ. 500.00 ಲಕ್ಷಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದರು.

ಉಪಯೋಗಿಸಿದ ಅಡುಗೆ ಎಣ್ಣೆಯಿಂದ ಬಯೋ ಡೀಸೆಲ್ ತಯಾರಿಸುವ ಯೋಜನೆಯನ್ನು ಎನ್.ಐ.ಇ ವಿದ್ಯಾಸಂಸ್ಥೆಯ ಮಾರ್ಗದರ್ಶನ ಮತ್ತು ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಉತ್ಪತಿಯಾಗುವ ಡೀಸೆಲ್‍ನನ್ನು ಪಾಲಿಕೆ ವಾಹನಗಳಿಗೆ ಬಳಸಲು ನಿರ್ಧರಿಸಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳಿಗಾಗಿ 2020-21ನೇ ಸಾಲಿನಲ್ಲಿ ಪಾಲಿಕೆಯ ಸ್ವಂತ ಆದಾಯ ಹಾಗೂ ನಿರೀಕ್ಷಿತ ರಾಜ್ಯ ಹಣಕಾಸು ಆಯೋಗದ ಮುಕ್ತನಿಧಿ ಅನುದಾನವು ಸೇರಿದಂತೆ ಒಟ್ಟಾರೆ 2253.04 ಲಕ್ಷಗಳನ್ನು ಕಾಯ್ದಿರಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಸ್ವಚ್ಛತೆ ಕಾಪಾಡುವ ದೃಷ್ಠಿಯಿಂದ ಪಾಲಿಕೆ ವ್ಯಾಪ್ತಿಯ ಪ್ರತಿ ವಲಯ ಕಚೇರಿಗೆ 1 ರಂತೆ ಹಿಟಾಚಿ (ಜೆ.ಸಿ.ಬಿ.) ಯಂತ್ರಗಳನ್ನು ಖರೀದಿಸಲು 250 ಲಕ್ಷಗಳನ್ನು ಕಾಯ್ದಿರಿಸಲಾಗಿದೆ. ದೇಶದ ರಕ್ಷಣೆಗೆ ಪ್ರಾನತೆತ್ತ ವೀರ ಯೋಧರ ಕುಟುಂಬಕ್ಕೆ ಮಹಾನಗರ ಪಾಲಿಕೆ ವತಿಯಿಂದ ರೂ.1.00 ಲಕ್ಷ ಆರ್ಥಿಕ ನೆರವು ನೀಡಲಿ ನಿರ್ಧರಿಸಿದೆ.

ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ವೈದ್ಯರ ಶಿಫಾರಸ್ಸಿನ ಮೇರೆಗೆ ಪ್ರಧಾನಮಂತ್ರಿಗಳ ಜನೌಷಧಿ ಕೇಂದ್ರಗಳಲ್ಲಿ ಖರೀದಿಸುವ ಔಷಧಿಗಳಿಗೆ ಪಾಲಿಕೆಯಿಂದ ಸಹಾಯಧನ ನೀಡಲು ನಿರ್ಧರಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ನಗರದ ಪ್ರಮುಖ ಸ್ಥಳಗಳಲ್ಲಿ ಉಚಿತವಾಗಿ ವೈ-ಫೈ ಸೇವೆಯನ್ನು vermount Digital Economy ಮಾದರಿಯಲ್ಲಿ ಉಚಿತ ವೈ-ಫೈ ಝೋನ್ ಹಾಗೂ ಹಾಟ್‍ಸ್ಪಾಟ್‍ಗಳನ್ನು ಅಮೆರಿಕಾದ 33 ವೆರ್‍ಮಾಂಟ್ ನಗರದಲ್ಲಿ ಅಳವಡಿಸಲಾಗಿರುವ ರೀತಿಯಲ್ಲಿ ಉಚಿತ ವೈ_ವೈ ಸೇವೆಗೆ ಪ್ರಾರಂಭಿಕ ಹಂತದಲ್ಲಿ 2 ಲಕ್ಷಗಳನ್ನು ಕಾಯ್ದಿರಿಸಲಾಗಿದೆ.

ಮೈಸೂರು ಯೋಗಲಕ್ಷ್ಮೀ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿನ ನಿವಾಸಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ
ಜನಿಸುವ ಹೆಣ್ಣು ಮಕ್ಕಳ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಬಾಂಡ್ ರೂಪದಲ್ಲಿ ಠೇವಣಿ ಇಡಲು ಯೋಜಿಸಲಾಗಿದ್ದು, ಇದಕ್ಕೆ 250 ಲಕ್ಷ ರೂ. ಕಾಯ್ದಿರಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಜ್ಞಾನ ಸಿರಿ ಯೋಜನೆ ಅಡಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರೈಸಿ ಕನ್ನಡ ಭಾಷೆಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರತಿ ವಿದ್ಯಾರ್ಥಿಗಳಿಗೆ 5 ಸಾವಿರಗಳಂತೆ ಪ್ರೋತ್ಸಾಹಧನ ನೀಡಲು 5 ಲಕ್ಷ ರೂ. ಮೀಸಲಿಡಲಾಗಿದೆ.

ವಿಶೇಷಚೇತನ ಕ್ಷೇಮಾಭಿವೃದ್ಧಿಗಾಗಿ ಪಾಲಿಕೆಯು ಸರ್ಕಾರದ ಮಾರ್ಗಸೂಚಿಯಂತೆ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಈ ಕಾರ್ಯಕ್ರಮ ಮುಂದುವರೆಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ 2020-21ನೇ ಸಾಲಿನ ಆಯವ್ಯಯದಲ್ಲಿ ರೂ. 342.44 ಲಕ್ಷಗಳನ್ನು ಕಾಯ್ದಿರಿಸಿದೆ. ಮೇಯರ್ ತಸ್ನಿಂ, ಉಪಮೇಯರ್ ಶ್ರೀಧರ್, ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ, ಮಹಾನಗರ ಪಾಲಿಕೆ ಸದಸ್ಯರು ಸೇರಿ ಇತರರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...