NEWSರಾಜಕೀಯ

ಆಂಬುಲೆನ್ಸ್‌ ವಿಷಯದಲ್ಲಿ ಗರಂ ಆದ ಸಿಎಂ ಬಿಎಸ್‌ವೈ

ಮೊದಲು ಕೊರೊನಾ ದೃಢಪಟ್ಟವರ ಆಸ್ಪತ್ರೆಗೆ ದಾಖಲಿಸಿ l ಅಧಿಕಾರಿಗಳಿಗೆ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಂಬುಲೆನ್ಸ್‌ ಇಲ್ಲ, ಬೆಡ್‌ ಖಾಲಿ ಇಲ್ಲ ಎಂಬ ಸುದ್ದಿಗಳು ಕೇಳಿ ಬರುತ್ತಿದ್ದು ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸ್ವತಃ ಸಿಎಂ ಬಿ.ಎಸ್‌. ಯಡಿಯೂರಪ್ಪ ಗರಂ ಆದ ಘಟನೆ ಇಂದು ನಡೆಯಿತು.

ನಾಳೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡುವ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಆಂಬುಲೆನ್ಸ್‌ ವಿಷಯ ಬಂದಾಗ ಸಿಟ್ಟಾದ ಬಿಎಸ್‌ವೈ ನಾನು ಮುಖ್ಯಮಂತ್ರಿ ಆದೇಶ ಮಾಡುತ್ತಿದ್ದೇನೆ ನಾನು ಮಾಡಿದ ಆದೇಶವನ್ನು ಪಾಲಿಸಿ ಸುಖ ಸುಮ್ಮನೆ ನೆಪ ಹೇಳಿಕೊಂಡು ಕಾಲ ಕಳೆಯಬೇಡಿ ಎಂದು ಅಧಿಕಾರಿಗಳಿಗೆ ಚಳಿ ಬಿಡಿಸಿದರು.

ಈ ನಡುವೆ ಕೆಲ ಸಚಿವರು ಕೂಡ ಸಿಎಂ ಅದೇಶವನ್ನು ಪಾಲಿಸುವಲ್ಲಿ ಬೇಜವಾಬ್ದಾರಿ ತಳೆದಿದ್ದು ಅವರ ಮಾತೇನು ಕೇಳಬೇಕು ಹೀಗೆಮಾಡಿ ಹಾಗೆಯೇ ಮಾಡಿ ಎಂದು ಅಧಿಕಾರಿಗಳಿಗೆ ಸಲಹೆ ನೀಡುತ್ತಿದ್ದಾರೆ ಎಂಬ ಮಾತುಗಳು ವಿಧಾನಸೌಧದ ಮೊಗಶಾಲೆಯಲ್ಲೇ ಹರಿದಾಡುತ್ತಿವೆ.

ಹೀಗಾಗಿ ಇದೆಲ್ಲವನ್ನು ಕಂಡು ಕಾಣದಂತೆ ಸಹಿಸಿಕೊಂಡಿದ್ದ ಸಿಎಂ ಕೊರೊನಾ ಸೋಂಕು ರಾಜ್ಯದಲ್ಲಿ ಹೇಚ್ಚಾಗುತ್ತಿರುವುದಕ್ಕೆ ಕೆಂಡಮಂಡಲರಾಗಿದ್ದು, ಸಿಎಂ ಹೇಳುವುದನ್ನಷ್ಟೇ ಪಾಲಿಸಿ ಉಳಿದ ವಿಷಯಗಳ ಬಗ್ಗೆ ಮಾತನಾಡಬೇಡಿ. ಮೊದಲು ಕೊರೊನಾ ಪಾಸಿಟಿವ್‌ ಇದೆ ಎಂದು ತಿಳಿದ ಕೂಡಲೇ ಅಂತ ವ್ಯಕ್ತಿಗಳನ್ನು ನಿಗದಿತ ಕೋವಿಡ್‌ ಆಸ್ಪತ್ರೆಗೆ ದಾಖಲಿಸುವ ಕೆಲ ನಾಳೆಯಿಂದ ಚುರುಕಾಗಿ ನಡೆಯಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...