ಬೆಂಗಳೂರು: ಈ ಕಾರ್ಗಿಲ್ ವಿಜಯ ದಿವಸದಂದು ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ದಿನ ಭಾರತದ ಏಕತೆ, ಸಾರ್ವಭೌಮತೆಗಳನ್ನು ಸಂಭ್ರಮಿಸುವ ಜತೆಗೆ ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದ್ದಾರೆ.