ಬೆಂಗಳೂರು: ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5072 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 90942 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 72 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1804 ಕ್ಕೆ (ಅನ್ಯ ಕಾರಣಕ್ಕೆ 6ಸೇರಿ) ಏರಿಕೆಯಾಗಿದೆ.
ಈ ನಡುವೆ, ಇಂದು ರಾಜ್ಯದಲ್ಲಿ 2403 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 33750 ಕ್ಕೇರಿದಂತಾಗಿದೆ. 1804 ಮಂದಿ ಸಾವನ್ನಪ್ಪಿದ್ದು, 55388 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 611 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2036 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43503ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 30 ಮಂದಿ ಬಲಿಯಾಗಿದ್ದಾರೆ.
ಭಾತರ ಸೇರಿದಂತೆ ವಿಶ್ವದ ನಾನಾ ರಾಷ್ಟ್ರಗಳ ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail