ಬೆಂಗಳೂರು: ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5030 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 80863 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 97 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1622 ಕ್ಕೆ (ಅನ್ಯ ಕಾರಣಕ್ಕೆ 6ಸೇರಿ) ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಮಂದಿ ಸೇರಿ ರಾಜ್ಯದಲ್ಲಿ ಒಟ್ಟು 97 ಮಂದಿ ಮೃತಪಟ್ಟಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2207 ಪ್ರಕರಣಗಳು ಸೇರಿ ರಾಜ್ಯದಲ್ಲಿ ಒಟ್ಟು 5030 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ
80863 ಕ್ಕೇರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 1038 ಜನ ಸೇರಿ ಒಟ್ಟು 2071 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾತರ ಸೇರಿದಂತೆ ವಿಶ್ವದ ನಾನಾ ರಾಷ್ಟ್ರಗಳ ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail