NEWSದೇಶ-ವಿದೇಶನಮ್ಮರಾಜ್ಯಶಿಕ್ಷಣ-

ಕೊರೊನಾ ಪೀಡಿತರು ಸಿಇಟಿ ಪರೀಕ್ಷೆ ಬರೆಯಲು ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜು. 30 ಮತ್ತು 31ರಂದು ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಬರೆಯಲು ಕೊರೊನಾ ಸೋಂಕು ಪೀಡಿತ ಅಭ್ಯರ್ಥಿ ಅಥವಾ ಕ್ವಾರಂಟೈನ್‌ನಲ್ಲಿ ಇರುವ ಅಭ್ಯರ್ಥಿಗೂ ಅವಕಾಶ ಇದೆ.

ಕೊರೊನಾ ಪೀಡಿತರು ಪರೀಕ್ಷೆ ಬರೆಯುವ ಸಲುವಾಗಿಯೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ಶಿಕ್ಷಣ ಇಲಾಖೆ ತಿಳಿಸಿದ್ದು ಇದರಿಂದ ಸಿಇಟಿಗೆ ಸಜ್ಜಾಗಿರುವ ಸೋಂಕಿತ ಅಭ್ಯರ್ಥಿಗಳಿಗೆ ಖುಷಿ ತಂದಿದೆ.

ನಿಯಂತ್ರಣ ವಲಯದಿಂದ ಬರುವ ಸೋಂಕು ಪೀಡಿತರ ನೇರ, ಪ್ರಾಥಮಿಕ   ಸಂಪರ್ಕ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ಅವಕಾಶ ನೀಡಬೇಕು. ಜತೆಗೆ ಎಚ್ಚರಿಕೆಯನ್ನು ವಹಿಸಬೇಕು ಎಂದು ತಿಳಿಸಿದೆ.

ಕೊರೊನಾ ದೃಢಪಟ್ಟ ಅಭ್ಯರ್ಥಿಗಳನ್ನು  ಪ್ರತ್ಯೇಕ ಕೊಠಡಿಯಲ್ಲಿ ಇರಿಸಬೇಕು ಜತೆಗೆ ಪರೀಕ್ಷೆಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...