ಬಳ್ಳಾರಿ: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಸಿಇಟಿ ಪರೀಕ್ಷೆಗಳು ಗುರುವಾರದಿಂದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳೊಂದಿಗೆ ಆರಂಭವಾಗಿದ್ದು,ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿರುವುದು ವಿಶೇಷ.
ಸಿ.ಇ.ಟಿ. ಪರೀಕ್ಷೆಗೆ ಬರೆಯಲು ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ Positive Cases ದೃಢಪಟ್ಟಂತಹ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ಪರೀಕ್ಷೆ ಬರೆಯಲು ಬಳ್ಳಾರಿಯ Government Dental College, Ballariಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಈ ವ್ಯವಸ್ಥೆ ಮಾಡಿದೆ.
ಬಳ್ಳಾರಿ, ಸಿರಗುಪ್ಲ ಹಾಗೂ ಹಡಗಲಿಯ ತಲಾ ಇಬ್ಬರು ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಸೇರಿದಂತೆ 6ಜನ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಜಿಲ್ಲಾಡಳಿತವು ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಅತ್ಯಂತ ಸುರಕ್ಷಿತವಾಗಿ ಅವರಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.