NEWSನಮ್ಮಜಿಲ್ಲೆ

ಮೈಸೂರು: ಮಾದಿಗಹಳ್ಳಿ ಮಹಿಳೆಗೆ ಕೊರೊನಾ ದೃಢ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಮಾದಿಗಹಳ್ಳಿಯ 60 ವರ್ಷದ ಮಹಿಳೆಯೊಬ್ಬರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

ಶುಕ್ರವಾರ ಕೊರೊನಾ ಸೋಂಕು ಇರುವುದು ಖಚಿತವಾಗುತ್ತಿದ್ದಂತೆ ಮೈಸೂರು ಕೋವಿಡ್‌ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ.

ಕಳೆದ ವಾರ ಸೊಂಟನೋವು ಎಂದು ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಹೋಗಿ ಬಂದಿದ್ದರು. ನಂತರ ಅವರಿಗೆ ಜ್ವರ, ತಲೆನೋವು ಕಾಣಿಸಿಕೊಂಡಿದೆ. ಬಳಿಕ ಅವರ ಗಂಟಲು ದ್ರವ ಮತ್ತು ರಕ್ತವನ್ನು ಕೋವಿಡ್‌ ಆಸ್ಪತ್ರೆಗೆ ಕಳುಹಿಸಿ ಟೆಸ್ಟ್‌ ಮಾಡಿಸಿದ್ದು, ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಸೋಂಕು ಇರುವುದು ದೃಢಪಡುತ್ತಿದ್ದಂತೆ ಅವರನ್ನು ನಿಗದಿತ ಕೋವಿಡ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಈ ನಡುವೆ ಅವರ ಮನೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಜತೆಗೆ  ಅವರ ಕುಟುಂಬದವರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ