ಬೆಂಗಳೂರು: ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5324 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 101465ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 75 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1961ಕ್ಕೆ (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.
ಈ ನಡುವೆ, ಇಂದು ರಾಜ್ಯದಲ್ಲಿ 1847 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 37685ಕ್ಕೇರಿದಂತಾಗಿದೆ. 1961 ಮಂದಿ ಸಾವನ್ನಪ್ಪಿದ್ದು, 61819 ಸಕ್ರಿಯ ಪ್ರಕರಣಗಳಿವೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1470 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 46923 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 26 ಮಂದಿ ಬಲಿಯಾಗಿದ್ದಾರೆ.
ಭಾತರ ಸೇರಿದಂತೆ ವಿಶ್ವದ ನಾನಾ ರಾಷ್ಟ್ರಗಳ ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಜಿಲ್ಲಾವಾರು ಕೋವಿಡ್-19ರ ಅಂಕಿ ಅಂಶಗಳ ವಿವರ
District-wise #covid19 abstract report pic.twitter.com/miLuU1KaO2
— ಕೋವಿಡ್ ಕರ್ನಾಟಕ (@CovidKarnataka) July 27, 2020