ಬೆಂಗಳೂರು: ರಾಜ್ಯದಲ್ಲಿ ಇಂದು 34 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ ಮತ್ತು ಕಲಬುರಗಿಯ 60 ವರ್ಷದ ವೃದ್ಧ ಕೊರೊನಾಗೆ ಬಲಿಯಾಗುವ ಮೂಲಕ ಮೃತರ ಸಂಕ್ಯೆ 33ಕ್ಕೆ ಏರಿಕೆ ಆಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅದರಲ್ಲಿ ಅತಿ ಹೆಚ್ಚು ಬೀದರ್ನಲ್ಲಿ 12, ಹಾಸನದಲ್ಲಿ 4, ಉತ್ತರ ಕನ್ನಡ ಜಿಲ್ಲೆಯಲ್ಲಿ 3 , ಕಲಬುರಗಿಯಲ್ಲಿ 8, ವಿಜಯಪುರ, ದಾವಣಗೆರೆ, ಬೆಂಗಳೂರು ನಗರದಲ್ಲಿ ತಲಾ ಎರಡು, ದಕ್ಷಿಣ ಕನ್ನಡದಲ್ಲಿ ಒಂದು ಸೋಂಕಿತ ಪ್ರಕರಣ ಪತ್ತೆಯಾಗಿವೆ.
ರಾಜ್ಯದಲ್ಲಿ ಇಂದು 34 ಕೋವಿಡ್-19 ಪಾಸಿಟಿವ್ ಬರುವ ಮೂಲಕ ಒಟ್ಟು 959ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಅದರಲ್ಲಿ 33 ಮಂದಿ ಮೃತಪಟ್ಟಿದ್ದು, ಇನ್ನು 451 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗುವ ಮೂಲಕ ಮನೆಗೆ ಮರಳಿದ್ದಾರೆ. ಹಾಗಾಗಿ 475 ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 75,048 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 75,048 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,440 ಮಂದಿ ಮೃತಪಟ್ಟಿದ್ದಾರೆ.24,900 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 43,74,757 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,94,402 ಜನರು ಮೃತಪಟ್ಟಿದ್ದಾರೆ. 16,22,045 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail