NEWSನಮ್ಮಜಿಲ್ಲೆ

ದಾವಣಗೆರೆ ಜಿಪಂ ಉಪಾಧ್ಯಕ್ಷರಾಗಿ ಸಾಕಮ್ಮ ಅವಿರೋಧ ಆಯ್ಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಜಿಲ್ಲಾ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಚನ್ನಗಿರಿ ತಾಲೂಕಿನ ಕೋಗಲೂರು ಕ್ಷೇತ್ರದ ಸಾಕಮ್ಮ ಗಂಗಾಧರ ನಾಯ್ಕ್ ಅವಿರೋಧವಾಗಿ ಆಯ್ಕೆಯಾದರು.

ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ಶನಿವಾರ ಜಿಪಂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಗೆ ಬೆಳಗ್ಗೆ 9.30 ರಿಂದ 10.30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸಾಕಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಬೆಂಗಳೂರು ಚುನಾವಣಾ ಪ್ರಾದೇಶಿಕ ಆಯುಕ್ತ  ವಿ.ಪಿ.ಇಕ್ಕೇರಿ ಅಧ್ಯಕ್ಷತೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 29 ಸದಸ್ಯರಲ್ಲಿ 20 ಮಂದಿ ಭಾಗವಹಿಸಿದ್ದರು. ಆಯುಕ್ತರು ಸಾಕಮ್ಮ ಗಂಗಾಧರ ನಾಯ್ಕ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಉಪಾಧ್ಯಕ್ಷೆ ಸಾಕಮ್ಮ, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸುವೆ. ಶಾಸಕರು, ಸಚಿವರೊಂದಿಗೆ ಸೇರಿಕೊಂಡು ಒಗ್ಗೂಡಿ ಕೆಲಸ ಮಾಡುವೆ. ಮುಖ್ಯವಾಗಿ ಕುಡಿಯುವ ನೀರು ಹಾಗೂ ಎನ್‍ಆರ್‍ಇಜಿ ಕೆಲಸÀಗಳಿಗೆ ಆದ್ಯತೆ ನೀಡಲಾಗುವುದು ಎಂದರು.

ಕೊರೊನಾ ಸಂದರ್ಭ ಇದಾಗಿದ್ದು, ಜನರಲ್ಲಿ ಆರೋಗ್ಯದ ಕುರಿತು ಹಾಗೂ ವೈರಾಣು ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುವೆ ಎಂದ ಅವರು, ಉಪಾಧ್ಯಕ್ಷೆಯಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಜಿಪಂ ಪ್ರಭಾರ ಅಧ್ಯಕ್ಷ ಲೋಕೇಶ್ವರ್, ಮಾಜಿ ಅಧ್ಯಕ್ಷೆ ಯಶೋದಮ್ಮ ಮರುಳಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ