NEWSನಮ್ಮಜಿಲ್ಲೆ

ಮೈಸೂರು: ಕೋವಿಡ್‌ ಟೆಸ್ಟ್‌ವೇಳೆ ಡಿಸಿ ಫೋನ್‌ ನಂಬರ್‌ ಕೊಟ್ಟು ಅಧಿಕಾರಿಗಳ ಯಾಮಾರಿಸಿದ ಸೋಂಕಿತ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಸೋಂಕಿತನೊಬ್ಬ ಕೋವಿಡ್‌ ಪರೀಕ್ಷೆ ವೇಳೆ ಮಾಹಿತಿಗಾಗಿ ತನ್ನ ಫೋನ್ ನಂಬರ್ ಕೊಡುವ ಬದಲು ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟಿದ್ದ ಘಟನೆ ನಗರದಲ್ಲಿ ನಡೆದಿದೆ.

ನಗರದ ಹೆಬ್ಬಾಳ್ ನಿವಾಸಿಯೊಬ್ಬ ಮೂಗು ಮತ್ತು ಗಂಟಲು ದ್ರವ ಸಂಗ್ರಹ ಕೇಂದ್ರದಲ್ಲಿ ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದ. ಆತನ ವಿಳಾಸ ಮೊಬೈಲ್ ನಂಬರ್ ಇನ್ನಿತರ ಮಾಹಿತಿ ಕಲೆ ಹಾಕುವ ವೇಳೆ ತನ್ನ ನಂಬರ್ ಬದಲಿಗೆ ಜಿಲ್ಲಾಧಿಕಾರಿ ಫೋನ್‌ ನಂಬರ್ ಕೊಟ್ಟು ಅಧಿಕಾರಿಗಳನ್ನು ಯಾಮಾರಿಸಿ  ಹೋಗಿದ್ದಾನೆ.

ಎರಡು ಮೂರು ದಿನ ಕಳೆದು ಬಂದ ಈತನ ಕೋವಿಡ್‌ ಪರೀಕ್ಷೆ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದರಿಂದ ಅಧಿಕಾರಿಗಳು ಫೋನ್ ಕರೆ ಮಾಡಿ ಸಂಪರ್ಕಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿದ ನಂತರವೇ ಅಧಿಕಾರಿಗಳಿಗೆ ಸತ್ಯ ತಿಳಿದಿದ್ದು ಅವರು ಅಚ್ಚರಿಗೆ ಒಳಗಾಗಿದ್ದಾರೆ.

ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಈ ಬಗ್ಗೆ ಪ್ರತಿಕ್ರಿಯಿಸಿ ಕಂಟ್ರೋಲ್ ರೂಮ್ ನಿಂದ ಕರೆ ಮಾಡಿ ಸಾರ್ ನಿಮಗೆ ಕೋವಿಡ್‌ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ಗೆ  ಒಳಗಾಗಿ ಎಂದು ಹೇಳಿದ್ದನ್ನು ಕೇಳಿ ನನಗೆ ಆಶ್ಚರ್ಯ ಆಯಿತು. ನಾನು ಜಿಲ್ಲಾಧಿಕಾರಿ ಮಾತನಾಡುತ್ತಿರುವುದು ಎಂದು ಅಧಿಕಾರಿಗಳಿಗೆ ತಿಳಿಸಿದೆ. ಮಾಹಿತಿ ಸಂಗ್ರಹಿಸುವ ವೇಳೆ ಆ ವ್ಯಕ್ತಿ ನನ್ನ ನಂಬರ್ ಕೊಟ್ಟಿರುವುದಾಗಿ ಅಧಿಕಾರಿ ತಿಳಿಸಿದರು.

ಕ್ವಾರಂಟೈನ್ ಗೆ ಒಳಗಾಗುವುದು ಮತ್ತು ಆಸ್ಪತ್ರೆಗೆ ದಾಖಲಾಗುವುದರಿಂದ ತಪ್ಪಿಸಿಕೊಳ್ಳಲು ಕೆಲವರು ಏನೆಲ್ಲಾ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ ಎಂಬುದನ್ನು ಅರಿತು ಒಂದು ಕ್ಷಣ ನನಗೆ ಅಚ್ಚರಿಯಾಯಿತು. ಜತೆಗೆ ನಗುಕೂಡ ಬಂತು ಎಂದು ಹೇಳಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಜನರು ಸಹಕರಿಸಬೇಕು ಸೂಕ್ತ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದು, ಒಂದು ವೇಳೆ ಸಂಪರ್ಕಿಸುವ ಮಾಹಿತಿ ತಪ್ಪಿದ್ದರೆ ಸೋಂಕಿತರು ಮತ್ತು ಅವನ ಪ್ರಾಥಮಿಕ   ಸೆಕೆಂಡರಿ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸುವುದು ತುಂಬಾ ಕಷ್ಟ ಎಂದು ಹೇಳಿದರು.

ಕೋವಿಡ್‌ ಪರೀಕ್ಷೆಗೆ ಒಳಗಾಗುವವರು ಈ ರೀತಿ ಅಧಿಕಾರಿಗಳ ದಾರಿ ತಪ್ಪಿಸುವ ಕೆಲಸ ಬಿಟ್ಟುಕೊರೊನಾ ಸೋಂಕು  ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತಕ್ಕೆ  ಸಹಕರಿಸಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಧಿಕಾರಿಗಳಿಗೆ ತುಂಬ ಮುಖ್ಯವಾಗಿರುತ್ತದೆ ಎಂದು ಡಿಸಿ  ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ