NEWSನಮ್ಮರಾಜ್ಯರಾಜಕೀಯ

ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸಿಎಂ, ಕೆಲ ಸಚಿವರ ಕುರ್ಚಿಗೆ ಶನಿ ಪ್ರಭಾವ?

ನನ್ನ ನ್ಯೂಡೆಲ್ಲಿ ಭೇಟಿ ಬಗ್ಗೆ ಅನಗತ್ಯ ಪ್ರಚಾರ ಬೇಡ l ಡಿಸಿಎಂ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ಏರಿಳಿತಗಳು ಇತ್ತೀಚೆಗೆ ಜರುಗುತ್ತಿರುವುದರಿಂದ ಆಡಳಿತ ಪಕ್ಷ ಬಿಜೆಪಿಯಲ್ಲಿ ಸ್ಥಾನಪಲ್ಲಟಗೊಳ್ಳುವ ಭೀತಿ ಮುಖ್ಯಮಂತ್ರಿಯಾದಿಯಾಗಿ ಹಲವು ಸಚಿವರಲ್ಲಿ ಉಂಟಾಗಿದೆ.

ಈ ಭಯದ ಬೆನ್ನಲ್ಲೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಹೀಗಾಗಿ ರಾಜ್ಯದ ಬಿಜೆಪಿ ಸರ್ಕಾರದಲ್ಲಿನ ನಾಯಕರ ಬದಲಾವಣೆ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಬಗ್ಗೆ ಡಿಸಿಎಂ ಸ್ಪಷ್ಟನೆಯನ್ನು ನೀಡಿದ್ದಾರೆ.

ಪ್ರೀತಿಯ ಹಿತೈಷಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ. ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದ್ದಾರೆ.

ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು  ಆಧಾರ ರಹಿತ ಪೋಸ್ಟ್ ಗಳನ್ನು ಮಾಡದಿರಿ ಎಂದು ಕೇಳಿಕೊಂಡಿದ್ದಾರೆ.

ಕ್ಷೇತ್ರದ ಜನತೆ ಪೋಸ್ಟ್ ಗಳನ್ನು ಹಾಕಿದ್ದಾರೆ ಎನ್ನುತ್ತಾ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಜವಾಬ್ದಾರಿಯುತ ಮಾಧ್ಯಮಗಳಲ್ಲಿ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಕೋವಿಡ್ ಸಮಸ್ಯೆಯನ್ನು ಎದುರಿಸಿ ಒಂದು ವರ್ಷ ಉತ್ತಮ ಆಡಳಿತ ನೀಡಿರುವ ನಾವೆಲ್ಲರೂ ಪಕ್ಷಕ್ಕೆ  ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು ಎಂದು ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ.

ಅಪ್ರಬುದ್ಧ ವಿಶ್ಲೇಷಣೆ ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿಕರ
ರಾಜಕೀಯ ವಿಪ್ಲವಗಳ ಬಗ್ಗೆ ಮಾಧ್ಯಮಗಳು ಅಪ್ರಬುದ್ಧ ವಿಶ್ಲೇಷಣೆಯಲ್ಲಿ ತೊಡಗುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿಕರ. ನಮ್ಮ ಲಕ್ಷ್ಯ ಆರೋಗ್ಯ ಕ್ರಾಂತಿಯ ಕಡೆಗೆ ಇರಬೇಕಾದ ಹೊತ್ತಿದು. ಸ್ವಾಸ್ಥ್ಯವನ್ನು ಕಾಪಾಡಿಕೊಂಡು, ಬಹುಬೇಗ ಒದಗಿರುವ ಮಹಾಮಾರಿಯ ಸಂಕಟದಿಂದ ಹೊರಬರಬೇಕಾಗಿರುವ ಸಮಯ. ಮಾಧ್ಯಮ ಮಿತ್ರರ ಆದ್ಯತೆಯು ಅದೇ ಆಗಿರಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ಕೋವಿಡ್- 19 ನಿಂದಾಗಿ ವಿಳಂಬಗೊಂಡಿದ್ದ ನಿರ್ಭಯಾ ಯೋಜನೆಯ ಅನ್ವಯ ಬಿಎಂಟಿಸಿ ಬಸ್‌ಗಳಲ್ಲಿ , ಮಹಿಳೆಯರ ಸುರಕ್ಷತೆಗಾಗಿ ಮೊಬೈಲ್ ಆ್ಯಪ್  ಹಾಗೂ ಕಣ್ಗಾವಲು ಅಳವಡಿಕೆ ಯೋಜನೆಗೆ 3 ತಿಂಗಳ ವಿಸ್ತರಣೆ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ವಿಜಯಪುರ – ಅಥಣಿ – ಸಂಕೇಶ್ವರದ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಲು ನೆರವು ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಬಸ್‌ಗಳ ಸಂಚಾರದ ಅವಧಿ ವಿಸ್ತರಿಸಿ
ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ನ್ಯೂಡೆಲ್ಲಿಯಲ್ಲಿ ಭೇಟಿ ಮಾಡಿ ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರದ ಅವಧಿ ವಿಸ್ತರಿಸಬೇಕೆಂದು ಮನವಿ ಮಾಡಲಾಯಿತು ಎಂದು ವಿವರಿಸಿದ್ದಾರೆ.

ಕೋವಿಡ್ ಲಾಕ್ಡೌನಿಂದಾಗಿ ಕೆಲವು ತಿಂಗಳುಗಳ ಕಾಲ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರ ವಿಳಂಬವಾಗಲಿರುವುದರಿಂದ ಈ ಕಾಲಾವಕಾಶ ಅಗತ್ಯ ಎಂದು ಪ್ರತಿಪಾದಿಸಲಾಯಿತು. ಈ ಮನವಿಗೆ  ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅವಧಿ ವಿಸ್ತರಣೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ ಎಂದರು.

ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.‌ ಸದಾನಂದ ಗೌಡ ಅವರನ್ನು ನ್ಯೂಡೆಲ್ಲಿಯಲ್ಲಿ ಇಂದು ಭೇಟಿ ಮಾಡಿ ಸಾರಿಗೆ ಇಲಾಖೆಗೆ ಸಂಬಂಧಪಟ್ಟ ಪ್ರಸ್ತಾವನೆಗಳ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...