NEWSನಮ್ಮರಾಜ್ಯರಾಜಕೀಯ

‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್‌ನಿಂದ : ಮಾಜಿ ಸಿಎಂ ಎಚ್‌ಡಿಕೆ

ಶಾಸಕರ ಖರೀದಿ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್‌ ಎರಡೂ ಪಕ್ಷಗಳೂ ‘ಅಪರಾಧಿ’ಗಳೇ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ ಎಂದು ಕಾಂಗ್ರೆಸ್‌ ನಾಯಕರನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ ಎಂದು ಕಿಡಿಕಾರಿದ್ದಾರೆ.

ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ‘ಅಪರಾಧಿ’ಗಳೇ ಎಂದು ತೀಕ್ಷ್ಣವಾಗಿ ತಿವಿದಿದ್ದಾರೆ.

ಎಸ್.ಎಂ. ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ನಿಂದ ಎಂದು ಹೇಳಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ. ಪ್ರಜಾಪ್ರಭುತ್ವ ಉಳಿಯಲಿ ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ.ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ.ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ ಎಂದು ಕಿವಿಮಾತನ್ನು ಹರಿತವಾದ ಮಾತುಗಳಿಂದ ಕಾಂಗ್ರೆಸ್‌ ನಾಯಕರಿಗೆ ತಿವಿದಿದ್ದಾರೆ.

1 Comment

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ