ಬೆಂಗಳೂರು: ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮರುಗಿದ್ದಾರೆ.
ಕೊರೊನಾ ಸೋಂಕು ಜನರ ಜೀವ-ಜೀವನದ ಜತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ ಎಂದರಿವ ಅವರು, ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ ಎಂದು ಹೇಳಿದ್ದಾರೆ.
ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೊನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದಿದ್ದಾರೆ.
ಆನ್ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ.
2/5— H D Kumaraswamy (@hd_kumaraswamy) July 31, 2020