NEWSನಮ್ಮರಾಜ್ಯರಾಜಕೀಯ

ಭೂ, ಎಪಿಎಂಸಿ ಕಾಯ್ದೆ ಸುಗ್ರೀವಾಜ್ಞೆ ವಾಪಸ್‌ ಪಡೆಯದಿದ್ದರೆ ಬೀದಿಗಿಳಿದು ಹೋರಾಟ: ಮಾಜಿ ಪ್ರಧಾನಿ ಎಚ್‌ಡಿಡಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸುವುದನ್ನು ಹಿಂದಕ್ಕೆ ಪಡೆಯದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಕಾಯ್ದೆಗಳನ್ನು ಜಾರಿಗೆ ತಂದು ರೈತರು, ಕಾರ್ಮಿಕರನ್ನು ಬೀದಿಪಾಲು ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿ ಮೂರು ಬಾರಿ ಸಿಎಂ ಅವರಿಗೆ ಪತ್ರ ಬರೆಯಲಾಗಿದೆ. ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961, ಸೆಕ್ಷನ್ 79-ಎ, 79-ಬಿ, 79-ಸಿ ರದ್ದು ಮಾಡಿರುವುದು ರೈತರೋಧಿ ಕ್ರಮವಾಗಿದೆ ಎಂದು ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿಯೂ ರಾಜ್ಯಕ್ಕೆ ಮಾರಕವಾಗಿದೆ ಮತ್ತು ಕೈಗಾರಿಕೆ ವಿಚಾರ ಹಾಗೂ ಮತ್ತಿತರ ನಿಯಮಗಳ ತಿದ್ದುಪಡಿ ಮಾಡಿ ಸರ್ಕಾರ ರೈತ ವಿರೋಧಿ ತೀರ್ಮಾನಗಳನ್ನೂ ತೆಗೆದುಕೊಂಡಿದೆ. ಮಹಾಮಾರಿ ಕೊರೊನಾ ಕಾರಣ ಇಷ್ಟು ದಿನ ತಾವು ಈ ಬಗ್ಗೆ ಧ್ವನಿಯೆತ್ತಿರಲಿಲ್ಲ. ಸರ್ಕಾರದ ನಿಯಮ ಉಲ್ಲಂಘಿಸಬಾರದೆಂದು ಹಿಂದೆ ಸರಿದಿದ್ದೆ , ಹೀಗೆ ಮುಂದುವರಿದರೆ ನಮ್ಮ ಜನತೆಗೆ ತೊಂದರೆಯಾಗುತ್ತದೆ ಎಂದು ಈ ದಿನ ಮಾಧ್ಯಮಗಳ ಮುಖಾಂತರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿರುವುದಾಗಿ ದೇವೇಗೌಡ ಸ್ಪಷ್ಟಪಡಿಸಿದರು.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕಾಯ್ದೆ ಪರಿಣಾಮ ಏನಾಗಲಿದೆ ಎಂಬ ಬಗ್ಗೆ ಸರ್ಕಾರ ಜನರಿಗೆ ಮಾಹಿತಿ ನೀಡದೆ ಕಾಯ್ದೆ ಜಾರಿ ಮಾಡಿದ್ದಾರೆ. ಇದರಿಂದ ರಿಯಲ್ ಎಸ್ಟೇಟ್ ಮಾಫಿಯಾಗೆ ಅನುಕೂಲವಾಗುತ್ತದೆ. ನಮ್ಮ ರೈತರು ಬೀದಿಗೆ ಬೀಳಲಿದ್ದಾರೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಈ ಮಾಫಿಯಾ ಹೆಚ್ಚಾಗುತ್ತದೆ. ಸರ್ಕಾರ ದಯಮಾಡಿ ಈ ಎಲ್ಲ ಕಾಯ್ದೆಗಳನ್ನು ರದ್ದು ಪಡಿಸಿ ರೈತರ ಪರವಾಗಿ ನಿಲ್ಲಬೇಕು. ಇದು ಅತ್ಯಂತ ಕೆಟ್ಟ ತಿದ್ದುಪಡಿ ಕಾಯ್ದೆ ಎಂದು ಟೀಕಾಪ್ರಹಾರ ನಡೆಸಿದರು.

ಯಾರೋ ಒಬ್ಬ ಕೈಗಾರಿಕೆ ಉದ್ಯಮಿ ಬಂದು ಭೂಮಿ ಪಡೆಯುತ್ತಾನೆ, ಕೈಗಾರಿಕೆ ಉದ್ದೇಶಕ್ಕಾಗಿ ಪಡೆದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು, ನಂತರ ಅವನಿಗೆ ಬೇಕಾದರೆ 7 ವರ್ಷಗಳ ನಂತರ ಅದೇ ಭೂಮಿಯನ್ನು ಪರಾಭಾರೆ ಕೂಡ ಮಾಡಬಹುದು.7 ವರ್ಷಗಳ ನಂತರ ಅಂದಿನ ಬೆಲೆಗೆ ಮಾರಾಟ ಮಾಡುತ್ತಾನೆ. ಇದರಿಂದ ರೈತರಿಗೆ ಆಗುವ ಲಾಭವೇನು ? ಬಹುಮತ ಇದೆ ಎನ್ನುವ ಒಂದೇ ಕಾರಣಕ್ಕೆ ಸರ್ಕಾರ ಇಂತಹ ಕಾನೂನು ತರುವುದು ನಿಜಕ್ಕೂ ರಾಜ್ಯದ ಜನತೆಗೆ ಮಾಡುವ ಅನ್ಯಾಯ. ಸರ್ಕಾರ ಈ ತಕ್ಷಣ ಎಚ್ಚೆತ್ತು ಇದನೆಲ್ಲ ನಿಲ್ಲಿಸಬೇಕು. ನಿಲ್ಲಿಸದಿದ್ದರೆ ಈ ನೀತಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ಚರಿಸಿದರು.

ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಎಷ್ಟು ಪ್ಯಾಕೇಜ್ ಬಿಡುಗಡೆ ಮಾಡಿದೆ, ಎಷ್ಟು ಹಣ ಪೋಲಾಗಿದೆ ಎಲ್ಲವೂ ಜಗಜ್ಜಾಹೀರಾಗಿದೆ. ಇನ್ನು ಕೊರೊನಾ ವೈದ್ಯಕೀಯ ಉಪಕರಣಗಳ ಹಗರಣದಲ್ಲಿ 2000 ಕೋಟಿ ರೂ. ಹಗರಣ ನಡೆದಿದೆ ಎಂದು ಕಾಂಗ್ರೆಸ್ ಕೂಡಾ ಆರೋಪ ಮಾಡಿದೆ. ಇದರ ಬಗ್ಗೆ ಹೋರಾಟ ಮಾಡಬೇಕೋ ಬೇಡವೋ ಗೊತ್ತಾಗುತ್ತಿಲ್ಲ. ಭ್ರಷ್ಟಾಚಾರ ಮಾಡಿದ್ದವರೇ  ಮತ್ತೆ ಶಕ್ತಿಶಾಲಿ ಆಗುವುದನ್ನು ಇತಿಹಾಸದಲ್ಲಿ ಕಂಡಿದ್ದೇವೆ.  ಹಾಗೆಂದ ಮಾತ್ರಕ್ಕೆ ತಾವು ಸುಮ್ಮನೆ ಕುಳಿತುಕೊಂಡಿದ್ದೇನೆ ಎಂದರ್ಥವಲ್ಲ ಎಂದು ಎಚ್ಚರಿಕೆ ನೀಡಿದರು.

ಮದ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳಿಸಿದ್ದು, ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಯತ್ನಮಾಡುತ್ತಿರುವುದು ಯಾರೆಂದು ಎಲ್ಲರಿಗೂ ಗೊತ್ತು.  ಎರಡೂ ರಾಷ್ಟ್ರೀಯ ಪಕ್ಷಗಳು ಜನತೆಯ ತೀರ್ಪು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಕೇವಲ ಅಧಿಕಾರ ಹಿಡಿಯುವುದೇ   ಮುಖ್ಯ ಆಗಬಾರದು ಎಂದು ಎಚ್.ಡಿ.ದೇವೇಗೌಡರು ಸಲಹೆ ನೀಡಿದ್ದು, ಇನ್ನು ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಮೃದುದೋರಣೆ ತಳೆದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

Leave a Reply

error: Content is protected !!
LATEST
KSRTC ನೌಕರರ ವೇತನ ವಿಷಯದಲ್ಲಿನ ನಿಮ್ಮ ಗೋಸುಂಬೆ ಆಟಗಳಿಗೆ ಯಾರು ಇಲ್ಲಿ ತಲೆ ಕೆಡಿಸಿಕೊಳ್ಳುವುದಿಲ್ಲ..!! NWKRTC: ಪಿಎಫ್‌ ಲೋನ್‌ ಹಣ ರಿಲೀಸ್‌ಗೂ ಕೊಡಬೇಕು ಸಾವಿರಾರು ರೂ. ಲಂಚ - ಧನದಾಹಿ ಸಿ.ಎಸ್‌.ಗೌಡರ್‌ ಪರ ನಿಂತರೇ ಡಿಸಿ? ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ