ಬೆಂಗಳೂರು: ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ತಂಡದ ಖಡಕ್ ಎಚ್ಚರಿಕೆಗೆ ಬೆದರಿದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಕೊರೊನಾ ಸೋಂಕಿತರಿಂದ ಪಡೆದಿದ್ದ ಹೆಚ್ಚುವರಿ 24 ರೂಪಾಯಿಯನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಿದೆ.
ಹೌದು! ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೊನಾ ಚಿಕಿತ್ಸೆಗಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ 24 ಲಕ್ಷ ರೂ.ಗಳನ್ನು ರಾಜರಾಜೇಶ್ವರಿ ನಗರ ಸಮೀಪದ ಆಸ್ಪತ್ರೆ ಸೋಮವಾರ ಹಿಂತಿರುಗಿಸಿದೆ.
ಇನ್ನುಯಾವುದೇ ಆಸ್ಪತ್ರೆಯಾದರೂ ಸರ್ಕಾರ ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚು ಹಣ ಸುಲಿಗೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರೂಪಾ ಎಚ್ಚರಿಗೆ ನೀಡಿದ್ದಾರೆ.
ಹಣ ವಸೂಲಿ ಬಗ್ಗೆ ಆಸ್ಪತ್ರೆ ವಿರುದ್ಧ ಹಲವು ದೂರುಗಳು ಬಂದಿದ್ದವು. ಕೊರೊನಾ ಚಿಕಿತ್ಸೆಗೆ ದಾಖಲಿಸಿಕೊಳ್ಳುವ ಮುನ್ನವೇ 1ಲಕ್ಷದಿಂದ 2 ಲಕ್ಷ ರೂ.ವರೆಗೂ ಹಣವನ್ನು ಮುಂಗಡವಾಗಿ ಪಡೆಯುತ್ತಿದ್ದರು. ಸಂಪೂರ್ಣ ಚಿಕಿತ್ಸೆಗೆ 4-5 ಲಕ್ಷ ರೂ. ವೆಚ್ಚವಾಗಲಿದೆ ಎಂದು ರೋಗಿಗಳಿಗೆ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು. ಇದರಿಂದ ಸೋಂಕಿತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ದುಬಾರಿ ಹಣ ವಸೂಲಿ ಬಗ್ಗೆ ಮಾಹಿತಿ ತಿಳಿದ ಕೂಡಲೇ ಆಸ್ಪತ್ರೆಗೆ ನಮ್ಮ ತಂಡ ತೆರಳಿ ಪರಿಶೀಲಿಸಿದಾಗ ಹಣ ವಸೂಲಿ ಸಂಬಂಧ ದಾಖಲೆಗಳು ಸಿಕ್ಕಿದ್ದವು ಎಂದು ಹೇಳಿದ್ದಾರೆ.
ನಮ್ಮ ತಂಡಕ್ಕೆ 3 ಖಾಸಗಿ ಆಸ್ಪತ್ರೆಗಳ ಹೊಣೆಗಾರಿಕೆ ಇದೆ. ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರದ ಸೂಚನೆಗಳನ್ನು ಆಸ್ಪತ್ರೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪ್ರತಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಆ ಪೈಕಿ ಒಂದು ಆಸ್ಪತ್ರೆಯಲ್ಲಿ ಸೋಂಕಿತರಿಂದ ಹಣ ವಸೂಲಿ ಮಾಡಿದ ಪ್ರಕರಣ ದಾಖಲೆ ಸಮೇತ ಪತ್ತೆಯಾಗಿದ್ದರಿಂದ ಆ ಹಣವನ್ನು ವಾಪಸ್ ಕೊಡಿಸಿದ್ದೇವೆ ಎಂದು ರೂಪಾ ತಿಳಿಸಿದ್ದಾರೆ.
ಈಗ ಆಸ್ಪತ್ರೆ ತಾನು ಪಡೆದಿದ್ದ ಹೆಚ್ಚುವರಿ ಹಣವನ್ನು 22 ಸೋಂಕಿತರಿಗೆ ಮರಳಿಸಿದೆ. ಇನ್ನುಳಿದ 4-5 ಮಂದಿ ಬ್ಯಾಂಕ್ ದಾಖಲೆಗಳಲ್ಲಿ ವ್ಯತ್ಯಾಸವಾಗಿದೆ. ಆದಷ್ಟು ಶೀಘ್ರವೇ ಅದನ್ನು ಪರಿಶೀಲಿಸಿ ಅವರಿಗೂ ಹಣ ಜಮೆ ಮಾಡಿಲಸಾಲಾಗುವುದು ಎಂದು ಹೇಳಿದ್ದಾರೆ.
Super