NEWSನಮ್ಮರಾಜ್ಯರಾಜಕೀಯ

ಲಾಕ್‌ಡೌನ್‌ ಹಿನ್ನೆಲೆ: ಬೆಂಗಳೂರು ತೊರೆಯುತ್ತಿರುವ ಗ್ರಾಮೀಣರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನಲ್ಲಿ ಸಂಭವಿಸುತ್ತಿರುವ ಕೊರೊನಾ ಮಹಾಸ್ಫೋಟಕ್ಕೆ ತತ್ತರಿಸಿರುವ ರಾಜ್ಯದ ರಾಜಧಾನಿಗೆ ಬಂದಿದ್ದ ಗ್ರಾಮೀಣ ಪ್ರದೇಶದ  ಜನರು ಬಾಡಿಗೆ ಮನೆಯನ್ನು ತೊರೆದು ತಮ್ಮ ಸ್ವಂತ ಊರಿಗೆ ತೆರಳುತ್ತಿದ್ದಾರೆ.

ಇನ್ನು ಬೆಂಗಳೂರನ್ನು ಮಂಗಳವಾರ (ನಾಳೆ) ರಾತ್ರಿ 8 ಗಂಟೆಯಿಂದ 7ದಿನಗಳವರೆಗೆ ಸಂಪೂರ್ಣವಾಗಿ ಲಾಕ್‌ಡೌನ್‌ ಮಾಡುತ್ತಿರುವುದರಿಂದ ದುಡಿಮೆಗಾಗಿ ನಗರಕ್ಕೆ ಬಂದಿದ್ದ ಸಾವಿರಾರು ಮಂದಿ ತಮ್ಮ ಹಳ್ಳಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಇಂದು ತಮ್ಮ ತಮ್ಮ ಗ್ರಾಮಗಳಿಗೆ ತೆರಳುತ್ತಿರುವುದರಿಂದ  ಮೈಸೂರು ಮತ್ತು ನೆಲಮಂಗಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ಕಿಲೋ ಮೀಟರ್‌ ಗಟ್ಟಲೆ ಟ್ರಾಫಿಕ್‌ ಜಾಂ ಉಂಟಾಗಿದೆ.

ಇನ್ನು ಬೆಂಗಳೂರನ್ನು ತೊರೆಯುತ್ತಿರುವ ಜನರನ್ನು ಕೇಳಿದರೆ ನಾವು ಕೆಲಸವಿಲ್ಲದಿದ್ದರು ಈವರೆಗೂ ಹೇಗೊ  ಮನೆ ಬಾಡಿಗೆ ಮತ್ತು ಊಟದ ವ್ಯವಸ್ಥೆ ಮಾಡಿಕೊಂಡಿದ್ದೆವು. ಕಾರಣ ನಗರದಲ್ಲಿ ಕೊರೊನಾ ಕಡಿಮೆಯಾಗಬಹುದು ಎಂಬ ನಂಬಿಕೆಯಿಂದ ಇದ್ದೆವು. ಆದರೆ ಅದರ ತೀವ್ರತೆ ಹೆಚ್ಚಾಗುತ್ತಿದ್ದು, ಇನ್ನು ಆರು ತಿಂಗಳಾದರೂ ಕಡಿಮೆ ಆಗುವ ಲಕ್ಷಣಗಳು ಕಾಣುತ್ತಿಲ್ಲ ಆದ್ದರಿಂದ ಕೈಯಲ್ಲಿ ಕೆಲಸವಿಲ್ಲ ಇದರಿಂದ ಮನೆ ಬಾಡಿಗೆ ಕಟ್ಟಲು ಕಷ್ಟವಾಗುತ್ತಿದೆ. ಹೀಗಾಗಿ ಹಳ್ಳಿಗೆ ತೆರಳುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ.

ಹೌದು ಕೊರೊನಾ ಒಂದೆಡೆ ಬಾಧಿಸುತ್ತಿದ್ದರೆ ಇನ್ನೊಡೆದೆ ದೇಶದ ಆರ್ಥಿಕತೆ ಮಕಾಡೆ ಮಲಗಿದೆ. ಈ ನಡುವೆ ಇಂಧನ ಬೆಲೆ ಸೇರಿದಂತೆ ನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಜನ ಜೀವನ ದುಸ್ತರವಾಗಿರುವುದರಿಂದ ಬೇರೆ ದಾರಿ ಕಾಣದೆ ದುಡಿಮೆಗೆ ಬಂದಿದ್ದ ಹಳ್ಳಿಗರು ತಮ್ಮ ಕಾಲಿಗೆ ಬುದ್ಧಿ ಹೇಳುತ್ತಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ