ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ಕೆರೆ ಕಾಮೇಗೌಡ ಎಂದೇ ಹೆಸರಾಗಿರುವ ಕಾಮೇಗೌಡರ ಪರ ವಿರೋಧದ ಚರ್ಚೆ ಬಗ್ಗೆ ಕೇಳಿದ್ದೇನೆ, ಸದ್ಯದಲ್ಲೇ ಈ ಬಗ್ಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಸಚಿವ ಕೆ.ಸಿ. ನಾರಾಯಣ ಗೌಡ ತಿಳಿಸಿದ್ದಾರೆ.
ಮಂಡ್ಯ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಕೊರೊನಾದಿಂದ ಇಲ್ಲಿಯವರೆವಿಗೂ ಯಾವುದೇ ಸಾವು ಸಂಭವಿಸಿರಲಿಲ್ಲ. ಆದರೆ ಇಂದು ಆರು ಜನ ಮೃತಪಟ್ಟಿದ್ದಾರೆ. ಇದು ನೋವಿನ ಸಂಗತಿಯಾಗಿದೆ ಎಂದು ಹೇಳಿದರು.
ಇನ್ನು ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ 35 ಕಡೆಗಳಲ್ಲಿ ಸ್ಥಳ ಗುರುತಿಸಲಾಗಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ ಇಲ್ಲ. ಹಣದ ಕೊರತೆಯೂ ಇಲ್ಲ. ಯಾವುದೇ ರೋಗಿಗೂ ಚಿಕಿತ್ಸೆ ನೀಡುವಲ್ಲಿ ಸಮಸ್ಯೆ ಇಲ್ಲ. ಎಲ್ಲ ಶಾಸಕರು ಸಹಕಾರ ನೀಡಬೇಕು. ಶಾಸಕರಿಗೆ ಅಧಿಕಾರಿಗಳು . ಎಲ್ಲ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
ಶೀಘ್ರವೇ ಮೈಷುಗರ್ ಕಾರ್ಖಾನೆ ಆರಂಭವಾಗಬೇಕು ಅದಕ್ಕೆ ಬೇಕಾದ ಸಿದ್ಧತೆ ನಡೆದಿದೆ. ಜುಲೈ 21, 22ರಂದು ಈ ಸಂಬಂಧ ಸಭೆ ಇದೇ ಬಳಿಕ ಸಿಎಂ ಜೊತೆ ಚರ್ಚಿಸಿ ಕಾರ್ಖಾನೆಆರಂಭಿಸುತ್ತೇವೆ. ಕಾರ್ಖಾನೆ ಆರಂಭಿಸಲು ಕಾರ್ಮಿಕರೂ ಸಹಕರಿಸಬೇಕು ವಿನಾಕಾರಣ ಅಡ್ಡಿಪಡಿಸಿದರೆ ರೈತರಿಗೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದರು.