ಬಳ್ಳಾರಿ: ಕೊರೊನಾ ಮಹಾಮಾರಿ ರಾಜ್ಯದಲ್ಲಿ ತನ್ನ ಅಟ್ಟಹಾಸವನ್ನು ನಾಗಲೋಟದಲ್ಲಿ ಮುಂದುವರಿಸಿದ್ದು, ಅರಣ್ಯ ಮತ್ತು ಜಿಲ್ಲಾಉಸ್ತುವಾರಿ ಸಚಿವ ಆನಂದ್‌ಸಿಂಗ್ ಅವನ್ನು ಆವರಿಸಿಕೊಂಡಿದೆ.
ಆನಂದ್‌ಸಿಂಗ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಹೊಸಪೇಟೆಯ ತಮ್ಮ ನಿವಾಸದಲ್ಲೇ ಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ಅವರನ್ನು ಹೋಂ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡುತ್ತಿದ್ದು, ಅವರ ಕುಟುಂಬದವರನ್ನು ಸಹ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.