NEWSಕೃಷಿನಮ್ಮರಾಜ್ಯರಾಜಕೀಯ

14.5 ಸಾವಿರ ಕೋಟಿ ರೂ. ಕೃಷಿ ಸಾಲ ನೀಡುವ ಗುರಿ: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರಿಗೆ 14,500 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿಯನ್ನು ಪ್ರಸಕ್ತ ಸಾಲಿನಲ್ಲಿಹೊಂದಲಾಗಿದ್ದು,  ಈಗಾಗಲೇ 8,50,000 ರೈತರಿಗೆ 5,600 ಕೋಟಿ ರೂ. ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಭಾನುವಾರ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ “ಸಹಕಾರದ ಪ್ರಗತಿ – 2020” ಸಾಧನೆಗಳ ಕಿರುಹೊತ್ತಿಗೆಯನ್ನು ಸಿಎಂ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.  ಮುಂದಿನ ವರ್ಷದ ಗುರಿ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಕೃಷಿ ಸಾಲವನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಒಂದು ವರ್ಷದ ಸಾಧನೆ ಜತೆಗೆ ನಮ್ಮ ಸಹಕಾರ ಇಲಾಖೆಯಿಂದ 3 ತಿಂಗಳ ಅವಧಿಗೆ ಏನು ಸಾಧನೆ ಮಾಡಿದ್ದೇನೆ ಎಂಬುದರ ಕಿರುಹೊತ್ತಿಗೆಯನ್ನು ಹೊರತಂದಿದ್ದು, ಅದನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ, ಸಚಿವನಾಗಿ ನಾನು ನಿರ್ವಹಿಸಿದ ಜವಾಬ್ದಾರಿ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

ನಾವು ಈಗಾಗಲೇ 25 ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅರಿತಿದ್ದೇವೆ. ಪ್ರತಿ ಭೇಟಿ ವೇಳೆಯೂ ರೈತರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಪ್ರಸಕ್ತ ಬಾರಿ ರೈತರಿಗೆ ಮಧ್ಯಮಾವಧಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವಾಗಿ 14,500 ಕೋಟಿ ರೂಪಾಯಿ ಸಾಲ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದರು.

ಕೋವಿಡ್ 19 ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಎಪಿಎಂಸಿ ಹಾಗೂ ಸಹಕಾರ ಇಲಾಖೆ ವತಿಯಿಂದ 53 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿ ವಿತರಣೆ ಮಾಡಿದ್ದೇವೆ. ಎಪಿಎಂಸಿ ಕಾಯ್ದೆ ತಿದ್ದಪಡಿಯಾದ ನಂತರ ಶೇ.1 ಕ್ಕೆ ಸೆಸ್ ಇಳಿಸಲಾಗಿತ್ತು. ಬಳಿಕ ಇನ್ನೂ ಇಳಿಕೆ ಮಾಡುವ ಸಂಬಂಧ ಕೂಗು ಕೇಳಿಬಂದಿದ್ದರಿಂದ ಸಂಪುಟ ಸಭೆಯಲ್ಲಿ ಚರ್ಚಿಸಿ ಶೇ0.35ಕ್ಕೆ ಸೆಸ್ ಇಳಿಕೆ ಮಾಡಲಾಗಿದೆ ಎಂದರು.

ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ಯಕರ್ತೆಯರಿಗೆ ತಲಾ 3 ಸಾವಿರ ರೂಪಾಯಿಯಂತೆ 12.75 ಕೋಟಿ ರೂಪಾಯಿಯನ್ನು ಇಲಾಖೆ ವತಿಯಿಂದ ನೀಡಲಾಗುತ್ತಿದ್ದು, ಈಗಾಗಲೇ 32 ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ನೀಡಲಾಗಿದೆ. ಉಳಿದ 10 ಸಾವಿರ ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲಿಯೇ ಪ್ರೋತ್ಸಾಹಧನ ನೀಡಲಾಗುವುದು ಎಂದು ಹೇಳಿದರು.

ಉಪ ಮುಖ್ಯಮಂತ್ರಿ  ಅಶ್ವಥ್ ನಾರಾಯಣ್ ,  ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...