ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯಾ ಬಚ್ಚನ್ ಅವರಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಅಮಿತಾಭ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಐಶ್ವರ್ಯ, ಪುತ್ರಿ ಆರಾಧ್ಯಾ ಹಾಗೂ ಅತ್ತೆ ಜಯಾ ಬಚ್ಚನ್ ಅವರಿಗೂ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಮೂವರ ಪರೀಕ್ಷಾ ವರದಿ ಬಂದಿದ್ದು, ಐಶ್ವರ್ಯಾ ಹಾಗೂ ಆರಾಧ್ಯಾಗೆ ಸೋಂಕು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದ್ದರೆ ಜಯಾ ಬಚ್ಚನ್ ಅವರಿಗೆ ನೆಗಟಿವ್ ಎಂದು ಬಂದಿದೆ.
ಶನಿವಾರ ರಾತ್ರಿ 10.30ರ ವೇಳೆ ಸ್ವತಃ ಅಮಿತಾಭ್ ಅವರೇ ತಮಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಟ್ವಿಟ್ ಮಾಡಿ ತಿಳಿಸಿದ್ದರು. ಇದಾಗಿ ಕೆಲ ಸಮಯದ ನಂತರ ಅವರ ಪುತ್ರರಾದ ಅಭಿಷೇಕ್ ಬಚ್ಚನ್ ಸಹ ಸೋಂಕು ಇರುವುದಾಗಿ ಟ್ವೀಟ್ ಮಾಡಿದ್ದರು. ಈಗ ಅಮ್ಮ ಹೊರತು ಪಡಿಸಿತಿ ಪತ್ನಿ ಮತ್ತು ಪುತ್ರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇನ್ನು ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ.
So sad