ಮೈಸೂರು: ತಿ.ನರಸೀಪುರ ತಾಲೂಕಿನ ಕೇತುಪುರದ 60 ವರ್ಷದ ಮಹಿಳೆಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ಬುಧವಾರ ಅವನ್ನು ಬನ್ನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲಿಸಿಲಾಗಿತ್ತು, ನಂತರ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಕೋವಿಡ್ ವಾರ್ಡ್ಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಬನ್ನೂರಿನ ಆರೋಗ್ಯ ಕೇಂದ್ರಕ್ಕೆ ಕೊರೊನಾ ನಿಯಂತ್ರಕ ದ್ರಾವಣವನ್ನು ಸಿಂಪಡಿಸಲಾಗುತ್ತಿದೆ. ಜತೆಗೆ ಸೀಲ್ಡೌನ್ ಮಾಡಲಾಗಿದ್ದು ಇನ್ನು ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುವುದು ಕಷ್ಟಕರವಾಗಲಿದೆ.